ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಫುಲ್ ಖುಷ್

ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಫುಲ್ ಖುಷ್

ನವದೆಹಲಿ, (ಏಪ್ರಿಲ್ 13): ಕರ್ನಾಟಕ ಸಂಪುಟ ಪುನಾರಚನೆ (cabinet reshuffle) ಹಕ್ಕೋತ್ತಾಯಕ್ಕಾಗಿ ಕಾಂಗ್ರೆಸ್ ಶಾಸಕರು ದೆಹಲಿ ಯಾತ್ರೆ ಕೈಗೊಂಡಿದ್ದು, ಇಂದು (ಏಪ್ರಿಲ್ 13) ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಭೇಟಿ ಮಾಡಿ ಮಾಡಿದ್ದಾರೆ. ನವದೆಹಲಿಯ ರಾಜಾಜಿ ಮಾರ್ಗದಲ್ಲಿರುವ ನಿವಾಸದಲ್ಲಿ ಖರ್ಗೆ ಅವರನ್ನು ಭೇಟಿಯಾದ ಹಿರಿಯ ಶಾಸಕರು ಸಂಪುಟ ಪುನಾರಚನೆಗೆ ಮನವಿ ಮಾಡಿದ್ದಾರೆ. ಅಲ್ಲದೇ ಸಂಪುಟ ಪುನಾರಚನೆ ವೇಳೆ ತಮ್ಮನ್ನು ಪರಿಗಣಿಸುವಂತೆ ವಿನಂತಿಸಿಕೊಂಡಿದ್ದಾರೆ. ಇದಕ್ಕೆ ಖರ್ಗೆ ಸಹ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕರಾದ ಅಶೋಕ್ ಪಟ್ಟಣ, ಹಾಗೂ ಟಿಬಿ ಜಯಚಂದ್ರ ಸ್ಪಷ್ಟಡಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಹಿರಿಯ ಶಾಸಕ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸಚಿವ ಸಂಪುಟ ಪುನರ್ ರಚನೆ ಕುರಿತು ಚರ್ಚೆ ಮಾಡಿದ್ದೇವೆ. ಸಹನೂಭೂತಿಯಿಂದ ನಮ್ಮ ಮನವಿ ಕೇಳಿದ್ದು, ಅವರು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ನಮ್ಮ ಮನವಿ ನಾವು ಮಾಡಿದ್ದೇವೆ. ಸಿಎಂ ಬದಲಾವಣೆ ಕುರಿತು ನಾವು ಯಾವುದೇ ಚರ್ಚೆ ಮಾಡಿಲ್ಲ. ನಾಲ್ಕು ಗೋಡೆಗಳ ನಡುವೆ ಈ ವಿಷಯ ಇದೆ. ಖರ್ಗೆಯವರು ನಮಗೆ ಭರವಸೆ ಕೊಟ್ಟಿದ್ದಾರೆ. ಸಂಪುಟ ಪುನರ್ ರಚನೆ ಆಗುತ್ತೆ ಅನ್ನುವ ವಿಶ್ವಾಸ ಇದೆ ಎಂದರು.

ಇದನ್ನೂ ಓದಿ: ಸಂಪುಟ ಪುನಾರಚನೆಗೆ ಡಿಕೆಶಿ ವಿರೋಧ: ದಿಲ್ಲಿಗೆ ಹೋದ ಶಾಸಕರಿಗೆ ಖಡಕ್ ಎಚ್ಚರಿಕೆ ಸಂದೇಶ

Source link

Leave a Reply

Your email address will not be published. Required fields are marked *