ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆ ಮೇಲೆ ನೂತನ ಸಚಿವರ ಕಣ್ಣು: ಸಮಾಜ ಕಲ್ಯಾಣ ಇಲಾಖೆಗಾಗಿ ಭಾರಿ ಪೈಪೋಟಿ – Kannada News | Karnataka Cabinet Expansion: New Ministers Compete for Key Portfolios, Social Welfare Department in High Demand

ಬೆಂಗಳೂರು, ಆಗಸ್ಟ್​ 05: ಸಂಪುಟ ವಿಸ್ತರಣೆಯಾದ ಎರಡು ದಿನಗಳ ನಂತರವೂ ಕರ್ನಾಟಕದಲ್ಲಿ ಖಾತೆ ಹಂಚಿಕೆ ಅಂತಿಮವಾಗಿಲ್ಲ. ಸಚಿವರು ಪ್ರಬಲ ಖಾತೆಗಳಿಗಾಗಿ ತೀವ್ರ ಲಾಬಿ ನಡೆಸುತ್ತಿದ್ದಾರೆ. ವಿಶೇಷವಾಗಿ, ಸಮಾಜ ಕಲ್ಯಾಣ ಇಲಾಖೆಯ ಮೇಲೆ ಹಲವು ಪ್ರಮುಖ ನಾಯಕರು ಕಣ್ಣಿಟ್ಟಿದ್ದಾರೆ. ಆಹಾರ ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ತಮ್ಮ ಹಾಲಿ ಖಾತೆಯನ್ನು ಬದಲಿಸಿ ಸಮಾಜ ಕಲ್ಯಾಣ ಇಲಾಖೆಯನ್ನು ಪಡೆಯಲು ಹೈಕಮಾಂಡ್ ಮಟ್ಟದಲ್ಲಿ ಲಾಬಿ ಮಾಡುತ್ತಿದ್ದಾರೆ. ಇದೇ ಖಾತೆಗೆ ಪಿ.ಎಂ. ನರೇಂದ್ರ ಸ್ವಾಮಿ ಹಾಗೂ ಮಾಜಿ ಸಚಿವರಾದ ಶಿವರಾಜ್ ತಂಗಡಗಿ ಸಹ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *