ಬೆಂಗಳೂರು, (ಆಗಸ್ಟ್ 05): ಡಿಕೆ ಶಿವಕುಮಾರ್ (DK Shivakumar) ಸರ್ಕಾರದ ಸಂಪುಟ ವಿಸ್ತರಣೆ ಬಳಿಕ ಕರ್ನಾಟಕ ಕಾಂಗ್ರೆಸ್ನಲ್ಲಿ ಕೆಲ ಗೊಂದಲಗಳು ಹುಟ್ಟಿಕೊಂಡಿವೆ. ಸಚಿವ ಸ್ಥಾನ ಸಂಬಂಧ ಸಿದ್ದರಾಮಯ್ಯ (Siddaramaiah) ಕೊಂಚ ಬೇಸರಗೊಂಡಂತೆ ಕಾಣುತ್ತಿದ್ದು, ತಾವು ಹೇಳಿದವರಿಗೆ ಸಚಿವ ಸ್ಥಾನ ನೀಡದಿದ್ದರಿಂದ ನೂತನ ಸಚಿವ ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎನ್ನಲಾಗುತ್ತಿದೆ. ಸಂಪುಟ ವಿಸ್ತರಣೆ ಬಗ್ಗೆ ಹಲವು ಶಾಸಕರಲ್ಲಿ ಅಸಮಾಧಾನ ಹೊಗೆಯಾಡುತ್ತಿರುವಾಗಲೇ ಸಿದ್ದರಾಮಯ್ಯನವರ ಈ ನಡೆ, ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಮತದ ಬಗ್ಗೆ ತೀವ್ರ ಚರ್ಚೆಗೆ ಕಾರಣವಾಗಿದೆ. ಇನ್ನು ಸಿದ್ದರಾಮಯ್ಯ ಗೈರಾಗಿದ್ಯಾಕೆ? ಎನ್ನುವ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಕಾರಣ ಕೊಟ್ಟಿದ್ದಾರೆ.