ಬೆಂಗಳೂರು, ಫೆಬ್ರವರಿ 19: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ತಮ್ಮನ್ನು ಸಚಿವ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ. ವ್ಯವಹಾರಿಕ ಒತ್ತಡ ಮತ್ತು ಕ್ಷೇತ್ರದ ಕೆಲಸಗಳ ಕಾರಣ ನೀಡಿ, ಕಳೆದ ವಾರವೇ ಸಿಎಂ ಎದುರು ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರಂತೆ. ಈ ಬೆಳವಣಿಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ. ಸಾಮಾನ್ಯವಾಗಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಯುವ ಸಂದರ್ಭದಲ್ಲಿ, ಹಾಲಿ ಸಚಿವರೊಬ್ಬರು ರಾಜೀನಾಮೆ ನೀಡಲು ಮುಂದಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಇದು ತಮ್ಮ ಪುತ್ರನಿಗೆ ಉಪಚುನಾವಣೆಯಲ್ಲಿ ಟಿಕೆಟ್ ಪಡೆಯುವ ಉದ್ದೇಶದಿಂದ ಮಲ್ಲಿಕಾರ್ಜುನ್ ಅವರು ನಡೆಸಿದ ರಾಜಕೀಯ ತಂತ್ರಗಾರಿಕೆ ಇರಬಹುದೇ ಎಂಬ ಲೆಕ್ಕಾಚಾರವೂ ಶುರುವಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
