ದೇವನಹಳ್ಳಿ, ಜುಲೈ 15: ಸಿಎಂ ಡಿಕೆ ಶಿವಕುಮಾರ್ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಕೌಂಟ್ಡೌನ್ ಶುರುವಾಗಿದೆ. ಈಗಾಗಲೇ ಹಲವು ಸಚಿವಾಕಾಂಕ್ಷಿಗಳು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಇಂದು 5:20ರ ವಿಮಾನದಲ್ಲಿ ಕೆಂಪೇಗೌಡ ಏರ್ ಪೋರ್ಟ್ನಿಂದ ದೆಹಲಿಗೆ ಪ್ರಯಾಣ ಬೆಳೆಸಿದರು. ಅದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘‘ಎಲ್ಲಾ ಶಾಸಕರಿಗೂ, ಕೇಳಲಿಕ್ಕೆ, ಹೇಳುವುದಕ್ಕೆ ಹಕ್ಕಿದೆ. ಅದರ ತೀರ್ಮಾನವನ್ನ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಆ ವಿಚಾರವನ್ನ ಬಹಳಕೂಲಂಕಷವಾಗಿ ನೋಡಿ ತೀರ್ಮಾನ ಮಾಡುತ್ತದೆ. ಎಲ್ಲಾ ವಿಚಾರಗಳು ಕೂಡ ಉಸ್ತುವಾರಿ ಸುರ್ಜೇವಾಲ ಅವರ ಬಳಿ ಇದೆ, ಅವರು ಚರ್ಚೆ ಮಾಡಿದಾಗ ಗೊತ್ತಾಗುತ್ತದೆ’’ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.