ಚಿತ್ರದುರ್ಗ, ಮೇ 10: ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ (65) ನಿಧನರಾಗಿದ್ದಾರೆ. ಅವರ ನಿಧನಕ್ಕೆ ವಿವಿಧ ಗಣ್ಯರು ಮತ್ತು ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ. ಡಿ. ಸುಧಾಕರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ ಡಿ. ಸುಧಾಕರ್ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಸಾರ್ವಜನಿಕರು ಮತ್ತು ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಂತಿಮ ದರ್ಶನದ ಬಳಿಕ, ಡಿ. ಸುಧಾಕರ್ ಅವರ ಅಂತ್ಯ ಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಲು ವ್ಯವಸ್ಥೆ ಮಾಡಲಾಗಿದೆ. ಚಳ್ಳಕೆರೆಯಲ್ಲಿರುವ ಸುಧಾಕರ್ ಶಟಲ್ ಕಾಕ್ ಕೋರ್ಟ್‌ನಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆಗಳು ನಡೆಯುತ್ತಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
