ಬೆಂಗಳೂರು, (ಆಗಸ್ಟ್ 05): ಸಚಿವ ಸಂಪುಟ ವಿಸ್ತರಣೆ ಹಾಗೂ ‘ಪೇಮೆಂಟ್ ಸೀಟ್’ ಹಂಚಿಕೆ ಕುರಿತು ಶಾಸಕ ಆರ್. ಬಿ. ತಿಮ್ಮಾಪುರ ಮತ್ತು ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ಸಂಭಾಷಣೆ ವೈರಲ್ ಆಗಿದೆ. ಈ ಸಂಭಾಷಣೆ ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತವನ್ನು ಮತ್ತೆ ಬೀದಿಗೆ ತಂದಿದ್ದು, ಪ್ರತಿಪಕ್ಷಗಳಿಗೆ ಹೊಸ ಪ್ರಹಾರ ಮಾಡಲು ಅಸ್ತ್ರ ಸಿಕ್ಕಂತಾಗಿದೆ. ಈ ಸಂಬಂಧ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಡಿಯೋ ಬಿಡುಗಡೆ ಮಾಡಿ ಸಚಿವ ಸ್ಥಾನ ಹರಾಜು ಆಗಿದೆ ಎಂದು ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
