ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್ ನೀಡಿ ಮುಷ್ಕರ ವಾಪಾಸ್ ಪಡೆದ ಸಾರಿಗೆ ನೌಕರರು – Kannada News | Karnataka Transport employees union withdraws strike And gave march 2 deadline to Government

ಬೆಂಗಳೂರು, (ಫೆಬ್ರವರಿ 19): ವಿವಿಧ ಬೇಡಿಕೆ ಈಡೇರಿಗೆ ಆಗ್ರಹಿಸಿ ‘ಬೆಂಗಳೂರು ಚಲೋ’ ಪ್ರತಿಭಟನೆ (Karnataka Transport employees strike) ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ವೇತನ ಪರಿಷ್ಕರಣೆ ಆದೇಶ ಹಾಗೂ ಹಲವು ತಿಂಗಳ ಹಿಂಬಾಕಿ ನೀಡಲು ಮಾರ್ಚ್ 2ರ ಗಡುವು ನೀಡಿದೆ.38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಹಿಂಬಾಕಿ ನೀಡುವುದಾಗಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೇ ವೇತನ ಪರಿಷ್ಕರಣೆಗೂ ಸಹ ಸರ್ಕಾರ ಒಪ್ಪಿಕೊಂಡಿದೆ. ಆದರೂ ಸಾರಿಗೆ ನೌಕರರಿಗೆ ತೃಪ್ತಿ ತಂದಿಲ್ಲ. 38 ತಿಂಗಳ ಹಿಂಬಾಕಿ ಹಣ ನೀಡಬೇಕೆಂದು ಪಟ್ಟಿ ಹಿಡಿದಿದ್ದಾರೆ. ಈ ಸಂಬಂಧ ಸ್ಥಳಕ್ಕೆ ಕೆಎಸ್​ಆರ್​ಟಿಸಿ ಎಂಡಿ ಫ್ರೀಡಂಪಾರ್ಕ್​​ ನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನೌಕರರ ಜತೆ ಚರ್ಚಿಸಿದರು. ಬಳಿಕ ಅಂತಿಮವಾಗಿ ಸಭೆ ಮಾಡಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದುಕೊಂಡಿದ್ದಾರೆ.

Source link

Leave a Reply

Your email address will not be published. Required fields are marked *