ಧಾರವಾಡ, ಫೆಬ್ರವರಿ 24: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡ ಶ್ರೀನಗರ ವೃತ್ತದಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ನಡೆದಿದೆ. ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಘೋಷಣೆ ಕೂಗಿರುವ ಪ್ರತಿಭಟನಾಕಾರರು, ಕಾಂಗ್ರೆಸ್ ನಾಯಕರ ಫೋಟೋ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಧಾರವಾಡ ಪೊಲೀಸರ ಹರಸಾಹಸ ಪಟ್ಟ ಪ್ರಸಂಗವೂ ನಡೆದದೆ. ಇನ್ನು ಇಂದು ಪ್ರತಿಭಟನೆಗೆ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ(AKSA) ಅನುಮತಿ ಕೇಳಿದ್ದು, ಪೊಲೀಸರು ನಿರಾಕರಿಸಿದ್ದರು. ಆದರೆ ಸಂಘಟನೆ ಹೈಕೋರ್ಟ್ ಮೊರೆ ಹೋಗಿದ್ದು, ಕೋರ್ಟ್ ಪೊಲೀಸರೊಂದಿಗೇ ಈ ಬಗ್ಗೆ ಚರ್ಚಿಸಿ ಎಂದು ತಿಳಿಸಿ ವಿಚಾರಣೆಯನ್ನು ಮಾರ್ಚ್ 3ಕ್ಕೆ ಮುಂದೂಡಿತ್ತು. ಈ ನಡುವೆ ಇಂದು ಬಿಜೆಪಿ ಹೋರಾಟಕ್ಕೆ ಪೊಲೀಸರು ಗ್ರೀನ್ ಸಿಗ್ನಲ್ ನೀಡಿರು ಹಿನ್ನೆಲೆ ಅನುಮತಿ ಇಲ್ಲದಿದ್ದರೂ ಯುವಕರು ಬೀದಿಗೆ ಇಳಿದಿದ್ದಾರೆ. ಜಯನಗರ ವೃತ್ತದ ಕಡೆಗೆ ಹೋಗುತ್ತಿದ್ದ ಪ್ರತಿಭಟನಾಕಾರರನ್ನು ಶ್ರೀನಗರ ವೃತ್ತದ ಬಳಿಯೇ ಪೊಲೀಸರು ತಡೆದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.