ಬೆಂಗಳೂರು, (ಫೆಬ್ರವರಿ 26): ಮೊನ್ನೆ ವಿದ್ಯಾಕಾಶಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆ (Dharwad Protest) ದೇಶದಲ್ಲಿ ಭಾರೀ ಸದ್ದು ಮಾಡಿದೆ. ಹೀಗಾಗಿ ಇದನ್ನು ಸಿದ್ದರಾಮಯ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇಂದು (ಫೆಬ್ರವರಿ 26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಮಹತ್ವದ ಚರ್ಚೆ ನಡೆದೆ. ನೇಮಕಾತಿಗೆ ಇರೋ ಸಾಧಕ ಭಾಧಕಗಳ ಬಗ್ಗೆ ಚರ್ಚಿಸಿದ್ದು, ಅಂತಿಮವಾಗಿ ಮೀಸಲಾತಿ ಮಿತಿ 50% ಮೀರದಂತೆ ಒಳಮೀಸಲಾತಿಯೊಂದಿಗೆ ನೇಮಕಾತಿಗೆ ತೀರ್ಮಾನಿಸಿದೆ. ಹೌದು…ಕರ್ನಾಟಕದ ವಿವಿಧ ಇಲಾಖೆಗಳ 56 ಸಾವಿರ ಖಾಲಿ ಹುದ್ದೆ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಇದರಿಂದ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಫಲಸಿಕ್ಕಂತಾಗಿದೆ.