ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಶಿಕ್ಷಣ ಇಲಾಖೆ ಮಾಸ್ಟರ್​​ ಪ್ಲ್ಯಾನ್​​: ಇಲ್ಲಿದೆ ಮಾಹಿತಿ – Kannada News | Education Department Launches New Schemes to Boost Government School Admissions

ಬೆಂಗಳೂರು, ಜನವರಿ 15: ಖಾಸಗಿ ಶಾಲೆಗಳ ಹಾವಳಿ ಸೇರಿ ನಾನಾ ಕಾರಣಗಳಿಂದ ವರ್ಷದಿಂದ ವರ್ಷಕ್ಕೆ ಸಕಾ್ರಿ ಶಾಲೆಗಳಲ್ಲಿನ ಮಕ್ಕಳ ದಾಖಲಾತಿ ಸಂಖ್ಯೆ ಗಣನೀಯ ಇಳಿಕೆ ಕಾಣುತ್ತಿದೆ. ಹೀಗಾಗಿ ಇವುಗಳನ್ನು ಇಳಿಕೆ ಮಾಡಲು ಶಿಕ್ಷಣ ಇಲಾಖೆ ಮಾಸ್ಟರ್​​ ಪ್ಲ್ಯಾನ್​​ ಮಾಡಿದ್ದು, ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಹಿನ್ನೆಲೆ ಹೊಸ ಭಾಗ್ಯಗಳ ಘೋಷಣೆಯ ಮೊರೆ ಹೋಗಿದೆ.  ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಒಂದೇ ವರ್ಷದಲ್ಲಿ 2.25 ಲಕ್ಷದಷ್ಟು ಕಡಿಮೆ ಆಗಿರೋದು ಗಂಭೀರ ಪ್ರಶ್ನೆಗಳಿಗೆ ಕಾರಣವಾದ ಬೆನ್ನಲ್ಲೇ ಇಲಾಖೆ ಅಲರ್ಟ್​​ ಆಗಿದೆ.

ಹೊಸ ಯೋಜನೆ ಏನು?

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಈಗಾಗಲೇ ಉಚಿತವಾಗಿ ಪುಸ್ತಕ, ಶೂ, ಬಟ್ಟೆ ಮತ್ತು ಮಧ್ಯಾಹ್ನದ ಊಟವನ್ನು ನೀಡಲಾಗ್ತಿದೆ. ಇದರ ಜೊತೆಗೆ ಇನ್ಮುಂದೆ ಓರ್ವ ವಿದ್ಯಾರ್ಥಿಗೆ 6 ನೋಟ್​​ ಬುಕ್​​ಗಳನ್ನೂ ಇಲಾಖೆ ನೀಡಲಿದೆ. ಹಾಗೆಯೇ ವಾರದ ಐದು ದಿನ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಕೂಡ ಇರಲಿದೆ. ಜನವರಿಯಿಂದಲೇ ದಾಖಲಾತಿ ಪ್ರಕ್ರಿಯೆ ಆರಂಭದ ಜೊತೆಗೆ ಯಾವುದೇ ಶುಲ್ಕಗಳು ಇಲ್ಲದಿರುವ ಬಗ್ಗೆ ಪಾಲಕರಿಗೆ ಮನವರಿಕೆ ಮಾಡಲು ಕ್ಯಾಂಪೇನ್​​ನ ​​ ಕೂಡ ಇಲಾಖೆ ಆರಂಭಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿವೆ 6,675 ಏಕೋಪಾಧ್ಯಾಯ ಶಾಲೆಗಳು, 188 ಸ್ಕೂಲ್​​ಗಳಲ್ಲಿ ಶೂನ್ಯ ದಾಖಲಾತಿ

ವಿಧಾನಪರಿಷತ್ ಅಧಿವೇಶನದಲ್ಲಿ ರಾಜ್ಯ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ, ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 188 ಸರ್ಕಾರಿ ಶಾಲೆಗಳಲ್ಲಿ ಒಂದೂ ಪ್ರವೇಶವಾಗಿಲ್ಲ. ಇದರಲ್ಲಿ 160 ಕಿರಿಯ ಪ್ರಾಥಮಿಕ ಶಾಲೆಗಳು, 25 ಹಿರಿಯ ಪ್ರಾಥಮಿಕ ಶಾಲೆಗಳು ಮತ್ತು 3 ಪ್ರೌಢಶಾಲೆಗಳಿವೆ. ಶೂನ್ಯ ದಾಖಲಾತಿ ಹೊಂದಿರುವ ಶಾಲೆಗಳು ತುಮಕೂರಿನಲ್ಲಿ 45 ಇದ್ದು, ನಂತರ ಕಲಬುರಗಿ 21, ಕೋಲಾರ 20, ಕೊಪ್ಪಳ 18 ಮತ್ತು ಬೀದರ್​​ನಲ್ಲಿ 17 ಇವೆ.

ಏಕೋಪಾಧ್ಯಾಯ ಶಾಲೆಗಳ ಸಂಖ್ಯೆ ಹೆಚ್ಚಳ

2018ರಲ್ಲಿ 3,450 ಇದ್ದ ಏಕೋಪಾಧ್ಯಾಯ ಶಾಲೆಗಳ ಸಂಖ್ಯೆ 2025-26ನೇ ಸಾಲಿನಲ್ಲಿ 6,675ಕ್ಕೆ ಏರಿಕೆ ಕಂಡಿದೆ. 1ರಿಂದ 5ನೇ ತರಗತಿವರೆಗೆ ಕನಿಷ್ಠ ತರಗತಿಗೊಬ್ಬ ಶಿಕ್ಷಕರಾದರೂ ಇರಬೇಕು ಅಥವಾ ಕನಿಷ್ಠ 12 ಮಕ್ಕಳಿದ್ದರೆ ಇಬ್ಬರು ಶಿಕ್ಷಕರಿರಬೇಕೆಂಬ ನಿಯಮ ಇದೆ. ಆದರೆ ಶಿಕ್ಷಕರ ಸಂಖ್ಯೆಯ ಕೊರತೆಯ ಕಾರಣ ಈ ನಿಯಮ ಪಾಲನೆ ಆಗುತ್ತಿಲ್ಲ. ರಾಜ್ಯಾದ್ಯಂತ 60 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಅದಾಗಲೇ ಖಾಲಿ ಇದ್ದು, 2028ರವೇಳೆಗೆ ಇನ್ನೂ 28 ಸಾವಿರ ಶಿಕ್ಷಕರು ನಿವೃತ್ತರಾಗಲಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:22 pm, Thu, 15 January 26

Source link

Leave a Reply

Your email address will not be published. Required fields are marked *