ಸರ್ಕಾರ ವಿದ್ಯಾರ್ಥಿಗಳ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಕೇಂದ್ರ ಸಚಿವ ಜೆ.ಪಿ. ನಡ್ಡಾ ಹೇಳಿಕೆ – Kannada News | Government Agreed to all Demands of students Union Minister JP Nadda said after Meeting with CJP

ನವದೆಹಲಿ, ಜುಲೈ 25: ಪರೀಕ್ಷಾ ವ್ಯವಸ್ಥೆಯಲ್ಲಿನ ಸುಧಾರಣೆಗಳು ಮತ್ತು ಪ್ರತಿಭಟನೆಗೆ ಸಂಬಂಧಿಸಿದ ಇತರ ವಿಷಯಗಳ ಕುರಿತು ನಡೆದ ಮಾತುಕತೆಯ ವೇಳೆ ‘ಕಾಕ್ರೋಚ್ ಜನತಾ ಪಾರ್ಟಿ’ (CJP)ಯ ಎಲ್ಲಾ ಬೇಡಿಕೆಗಳನ್ನು ಸರ್ಕಾರವು ಒಪ್ಪಿಕೊಂಡಿದೆ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ (JP Nadda) ತಿಳಿಸಿದ್ದಾರೆ. ಪರೀಕ್ಷಾ ಸುಧಾರಣೆಗಳ ಕುರಿತು ಸಿಜೆಪಿ ಸಲ್ಲಿಸಿರುವ 5 ಅಂಶಗಳ ಬೇಡಿಕೆಗಳ ಚಾರ್ಟರ್ ಅನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಲಿದ್ದು, ಮಾತುಕತೆಯ ನಂತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ನಡ್ಡಾ ಹೇಳಿದರು.

ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಪಿ ನಡ್ಡಾ, “ನೀವು ನನಗೆ ನೀಡಿದ ಈ 5 ಅಂಶಗಳ ಚಾರ್ಟರ್ ಶಿಕ್ಷಣ ಪರೀಕ್ಷೆಗಳ ಸುಧಾರಣೆಗೆ ಸಂಬಂಧಿಸಿದ್ದಾಗಿದೆ. ಈ ಸುಧಾರಣಾ ಚಾರ್ಟರ್ ಕುರಿತು ನಾವು ಗಂಭೀರವಾಗಿ ಆಲೋಚಿಸುತ್ತೇವೆ. ಪ್ರತಿಭಟನೆಯ ಸಮಯದಲ್ಲಿ ದಾಖಲಾದ ಪ್ರಕರಣಗಳ ಕುರಿತೂ ಚರ್ಚಿಸಲಾಗಿದೆ. ಪ್ರತಿಭಟನಾಕಾರರಿಗೆ ಎಫ್‌ಐಆರ್‌ಗಳ ಪ್ರತಿಯನ್ನು ಒದಗಿಸಲಾಗುವುದು. ಅವರ ವಿರುದ್ಧ ಯಾವುದೇ ಸೇಡು ತೀರಿಸಿಕೊಳ್ಳುವ ಕ್ರಮಗಳನ್ನು ಕೈಗೊಳ್ಳುವುದಿಲ್ಲ” ಎಂದು ಭರವಸೆ ನೀಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *