ಸಲ್ಮಾನ್ ಖಾನ್​​ಗೆ ಇಷ್ಟ ಆಯ್ತು ಸಾನ್ವಿ ಸುದೀಪ್ ಕಂಠ; ಮೆಚ್ಚುಗೆ ಸೂಚಿಸಿದ ನಟ – Kannada News | Salman Khan Praises Sanvi Sudeep’s Mast Malaika Song from Mark Movie

ಕನ್ನಡದಲ್ಲಿ ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆದ ‘ಮಾರ್ಕ್’ ಸಿನಿಮಾ ಸಾಕಷ್ಟು ಮೆಚ್ಚುಗೆ ಪಡೆಯಿತು. ಈ ಚಿತ್ರವವನ್ನು ಜನರು ಸಾಕಷ್ಟು ಕೊಂಡಾಡಿದರು. ಈ ಚಿತ್ರದ ‘ಮಸ್ತ್ ಮಲೈಕಾ’ (Mast Malaika) ಹಾಡನ್ನು ಅನೇಕರು ಬಹುವಾಗಿ ಇಷ್ಟಪಟ್ಟಿದ್ದಾರೆ. ಈ ಹಾಡಿನ ವಿಡಿಯೋ ಸಾಂಗ್ ಈವರೆಗೆ 33 ಮಿಲಿಯನ್ ಅಂದರೆ 3.3 ಕೋಟಿ ವೀಕ್ಷಣೆ ಕಂಡಿದೆ. ಸಾನ್ವಿ ಸುದೀಪ್ ಕಂಠದಲ್ಲಿ ಮೂಡಿಬಂದ ಈ ಹಾಡು ಬಾಲಿವುಡ್ ನಟ ಸಲ್ಮಾನ್ ಖಾನ್​​ಗೂ ಸಾಕಷ್ಟು ಇಷ್ಟ ಆಗಿದೆ. ಈ ಹಾಡಿನ ಬಗ್ಗೆ ಅವರು ಮೆಚ್ಚುಗೆ ಸೂಚಿಸಿದ್ದಾರೆ.

ಸಲ್ಮಾನ್ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಬಾಲಿವುಡ್ ಜೊತೆ ದಕ್ಷಿಣದ ಸಿನಿಮಾಗಳ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ. ಇಲ್ಲಿನ ಆಗು ಹೋಗುಗಳನ್ನು ಅವರು ಗಮನಿಸುತ್ತಾ ಇರುತ್ತಾರೆ. ಸಲ್ಮಾನ್ ಖಾನ್ ಅವರಿಗೆ ಸುದೀಪ್ ಮೇಲೆ ವಿಶೇಷ ಪ್ರೀತಿ ಕೂಡ ಇದೆ. ‘ದಬಾಂಗ್ 3’ ಚಿತ್ರದಲ್ಲಿ ಇವರು ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಸುದೀಪ್ ಹಾಡನ್ನು ಸಲ್ಲು ಬಹುವಾಗಿ ಇಷ್ಟಪಟ್ಟಿದ್ದಾರೆ.

‘ಮಸ್ತ್ ಮಲೈಕಾ’ ಹಾಡಿನ ಲಿಂಕ್​ ಅನ್ನು ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದಾರೆ ಸಲ್ಮಾನ್ ಖಾನ್. ‘ಸುಂದರವಾದ ಹಾಡು, ಒಳ್ಳೆಯದಾಗಲಿ’ ಎಂದು ಸಲ್ಮಾನ್ ಖಾನ್ ಅವರು ಬರೆದುಕೊಂಡಿದ್ದಾರೆ. ಈ ಸ್ಟೋರಿಯಲ್ಲಿ ಕಿಚ್ಚ ಸುದೀಪ್ ಹಾಗೂ ಸಾನ್ವಿಯನ್ನು ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಮಸ್ತ್ ಮಲೈಕಾ ಹಾಡಿಗೆ ಮೈಚಳಿ ಬಿಟ್ಟು ಡ್ಯಾನ್ಸ್ ಮಾಡಿದ ಜಾನ್ವಿ

‘ಮಸ್ತ್ ಮಲೈಕಾ’ ಹಾಡನ್ನು ಹಾಡಿದ್ದು ಸುದೀಪ್ ಮಗಳು ಸಾನ್ವಿ. ಸಲ್ಮಾನ್ ಖಾನ್ ಕೊಟ್ಟ ಈ ಮೆಚ್ಚುಗೆಗೆ ಸಾನ್ವಿ ಫುಲ್ ಖುಷ್ ಆಗಿದ್ದಾರೆ. ‘ಎಂತಹ ಅದ್ಭುತ ಗೌರವ. ಧನ್ಯವಾದಗಳು ಸಲ್ಮಾನ್ ಸರ್’ ಎಂದು ಸಾನ್ವಿ ತಮ್ಮ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಸುದೀಪ್ ಅವರು ಇದಕ್ಕೆ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಸಲ್ಮಾನ್ ಖಾನ್ ಅವರು ಸದ್ಯ ‘ಗಾಲ್ವಾನ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಹಾಡು ಗಮನ ಸೆಳೆಯುವ ರೀತಿಯಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *