ಸಲ್ಮಾನ್ ಖಾನ್ ತಂದೆ ಸಲೀಂ ಆರೋಗ್ಯ ಹೇಗಿದೆ? ವೈದ್ಯರಿಂದ ಗುಡ್​ನ್ಯೂಸ್ – Kannada News | Salim Khan Hospitalized on Ventilator: Doctors Confirm Stable Condition, Fans Relieved

ನಟ ಸಲ್ಮಾನ್ ಖಾನ್ ಅವರ ತಂದೆ ಮತ್ತು ಬಾಲಿವುಡ್‌ನ ಹಿರಿಯ ಬರಹಗಾರ ಸಲೀಂ ಖಾನ್ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದು ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿದೆ. ಸಲೀಂ ಖಾನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರಬಹುದು ಎಂಬುದು ಅನೇಕರ ಊಹೆ. ಆದರೆ, ಈ ಬಗ್ಗೆ ವೈದ್ಯರು ಸ್ಪಷ್ಟನೆ ನೀಡಿದ್ದಾರೆ, ‘ಸಲೀಂ ಖಾನ್ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ ಎಂದರೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ಅರ್ಥವಲ್ಲ. ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಅವರ ಆರೋಗ್ಯ ಸುಧಾರಿಸುತ್ತಿದೆ’ ಎಂದು ಲೀಲಾವತಿ ಆಸ್ಪತ್ರೆಯ ಡಾ. ಜಲೀಲ್ ಪಾಟ್ಕರ್ ಹೇಳಿದ್ದಾರೆ.

ಡಾ. ಜಲೀಲ್ ಪಾಟ್ಕರ್ ನೀಡಿದ ಮಾಹಿತಿಯ ಪ್ರಕಾರ , ‘ಸಲೀಂ ಖಾನ್ ಅವರನ್ನು ಮಂಗಳವಾರ ರಾತ್ರಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬ ವೈದ್ಯ ಸಂದೀಪ್ ಚೋಪ್ರಾ ಅವರ ಸಲಹೆಯ ಮೇರೆಗೆ, ಸಲೀಂ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಯಿತು. ಮೊದಲ ಪರೀಕ್ಷೆಯ ನಂತರ, ಅವರಿಗೆ ತಕ್ಷಣದ ಚಿಕಿತ್ಸೆಯ ಅಗತ್ಯವಿದೆ ಎಂದು ನಮಗೆ ಅರಿವಾಯಿತು. ಆದ್ದರಿಂದ ಅವರನ್ನು ಐಸಿಯುಗೆ ದಾಖಲಿಸಲಾಯಿತು. ಅವರ ರಕ್ತದೊತ್ತಡ ಹೆಚ್ಚಾಗಿತ್ತು. ಆದ್ದರಿಂದ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಯಿತು’ ಎಂದಿದ್ದಾರೆ.

‘ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ಹಾಗಂತ ಅವರ ಸ್ಥಿತಿ ಗಂಭೀರವಾಗಿಲ್ಲ. ಅಗತ್ಯವಿರುವ ಎಲ್ಲಾ ಪರೀಕ್ಷೆಗಳನ್ನು ಮಾಡಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ. ನಾಳೆ ಅವರನ್ನು ವೆಂಟಿಲೇಟರ್‌ನಿಂದ ತೆಗೆದುಹಾಕಲಾಗುತ್ತದೆ. ಅವರ ವಯಸ್ಸಿನ ಕಾರಣದಿಂದಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದೆ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದಿದ್ದಾರೆ ಜಲೀಲ್. ಸಲೀಂ ಖಾನ್ ಅವರಿಗೆ 90 ವರ್ಷ ವಯಸ್ಸಾಗಿದೆ. ಹೀಗಾಗಿ, ಭಯದ ವಾತಾವರಣ ನಿರ್ಮಾಣ ಆಗಿದೆ. ಆದರೆ, ವೈದ್ಯರು ನೀಡಿದ ಮಾಹಿತಿಯ ನಂತರ, ಕುಟುಂಬ ಮತ್ತು ಅಭಿಮಾನಿಗಳು ನಿರಾಳರಾಗಿದ್ದಾರೆ.

ಇದನ್ನೂ ಓದಿ: 55 ರೂಪಾಯಿ ಬಾಡಿಗೆ ರೂಮಿನಲ್ಲಿ ವಾಸವಾಗಿದ್ದ ಸಲ್ಮಾನ್​ ಖಾನ್​ ತಂದೆ ಸಲೀಂ ಖಾನ್

ಸಲೀಂ ಅನಾರೋಗ್ಯದ ಸುದ್ದಿ ತಿಳಿದ ನಂತರ ಇಡೀ ಖಾನ್ ಕುಟುಂಬ ಲೀಲಾವತಿ ಆಸ್ಪತ್ರೆಗೆ ಧಾವಿಸಿತು. ನಟ ಸಲ್ಮಾನ್ ಖಾನ್ ಕೂಡ ತಕ್ಷಣ ಆಸ್ಪತ್ರೆಗೆ ತಲುಪಿದರು. ಸಂಜಯ್ ದತ್ ಸೇರಿದಂತೆ ಅನೇಕರು ಆಗಮಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *