ಬಾಲಿವುಡ್ನ ಖ್ಯಾತ ನಟ ಸಲ್ಮಾನ್ ಖಾನ್ (Salman Khan) ಮತ್ತು ತೆಲುಗಿನ ಖ್ಯಾತ ನಿರ್ದೇಶಕ ವಂಶಿ ಪೈಡಿಪಲ್ಲಿ ಕಾಂಬಿನೇಷನ್ನ ಬಹುನಿರೀಕ್ಷಿತ ಚಿತ್ರದ ಬಗ್ಗೆ ಇಂಟರೆಸ್ಟಿಂಗ್ ಮಾಹಿತಿ ಕೇಳಿಬಂದಿದೆ. ಇನ್ನೂ ಈ ಚಿತ್ರಕ್ಕೆ ಶೀರ್ಷಿಕೆ ಅಂತಿಮವಾಗಿಲ್ಲ. ಸದ್ಯಕ್ಕೆ ‘SVC63’ ಎಂದು ಕರೆಯಲಾಗುತ್ತಿದೆ. ಪ್ರಸ್ತುತ ಚಿತ್ರರಂಗದಲ್ಲಿ ಈ ಸಿನಿಮಾ ಭಾರಿ ಸದ್ದು ಮಾಡುತ್ತಿದೆ. ಖ್ಯಾತ ನಿರ್ಮಾಪಕ ದಿಲ್ ರಾಜು ನಿರ್ಮಾಣದ ಈ ಬಿಗ್ ಬಜೆಟ್ ಆಕ್ಷನ್ ಎಂಟರ್ಟೈನರ್ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಸಲ್ಮಾನ್ ಖಾನ್ ತೆಗೆದುಕೊಂಡಿರುವ ಸಂಭಾವನೆ (Salman Khan Remuneration) ಬಗ್ಗೆ ಸುದ್ದಿ ಆಗುತ್ತಿದೆ.
ಸಾಮಾನ್ಯವಾಗಿ ಒಂದು ಸಿನಿಮಾಗೆ 120 ಕೋಟಿ ರೂಪಾಯಿಗೂ ಹೆಚ್ಚು ಸಂಭಾವನೆ ಪಡೆಯುವ ಸಲ್ಮಾನ್ ಖಾನ್, ‘SVC63’ ಚಿತ್ರಕ್ಕಾಗಿ ತಮ್ಮ ಸಂಭಾವನೆಯನ್ನು ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ವರದಿ ಆಗಿದೆ. ವರದಿಗಳ ಪ್ರಕಾರ, ಈ ಚಿತ್ರಕ್ಕಾಗಿ ಸಲ್ಮಾನ್ ಖಾನ್ ಅವರು ಕೇವಲ 70 ಕೋಟಿ ರೂಪಾಯಿ ಪಡೆಯಲು ಒಪ್ಪಿಕೊಂಡಿದ್ದಾರೆ.
ಸ್ನೇಹಕ್ಕಾಗಿ ಸಂಭಾವನೆ ಕಡಿತ?
ಚಿತ್ರರಂಗದ ಮೂಲಗಳ ಪ್ರಕಾರ, ಸಲ್ಮಾನ್ ಖಾನ್ ಅವರು ತಮ್ಮ ಇತ್ತೀಚಿನ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಕಾರಣ ಹಾಗೂ ಮಾರ್ಕೆಟ್ ಮೌಲ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ಚಿತ್ರದ ಲಾಭದಲ್ಲೂ ಅವರು ಪಾಲು ಪಡೆಯಬಹುದು ಎಂಬ ಮಾತು ಕೇಳಿಬಂದಿದೆ. ಚಿತ್ರತಂಡ ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ.
ಪ್ರಖ್ಯಾತ ಮಾಧ್ಯಮವೊಂದರ ವರದಿ ಪ್ರಕಾರ, ಈ ಪ್ರಾಜೆಕ್ಟ್ನ ಹಿಂದೆ ಸಲ್ಮಾನ್ ಅವರ ಆಪ್ತ ಗೆಳೆಯ ರಫಿ ಕಾಜಿ ಮಧ್ಯಸ್ಥಿಕೆ ವಹಿಸಿದ್ದಾರೆ. ರಫಿ ಕಾಜಿ ಅವರು ಈ ಸಿನಿಮಾದ ಸಹ-ನಿರ್ಮಾಪಕರಾಗಿಯೂ ಕಾಣಿಸಿಕೊಳ್ಳುತ್ತಿದ್ದು, ಗೆಳೆಯನ ಮೇಲಿನ ಗೌರವ ಮತ್ತು ಸ್ನೇಹದ ಕಾರಣಕ್ಕಾಗಿಯೇ ಸಲ್ಮಾನ್ ಅವರು ತಮ್ಮ ಸಂಭಾವನೆಯಲ್ಲಿ ಭಾರಿ ರಿಯಾಯಿತಿ ನೀಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಸಲ್ಮಾನ್ ಖಾನ್ ವಿಡಿಯೋ ನೋಡಿ ಅಭಿಮಾನಿಗಳಲ್ಲಿ ಆತಂಕ: ಸಲ್ಲುಗೆ ಕಾಡುತ್ತಿದೆಯೇ ಅನಾರೋಗ್ಯ?
ಪೋಲಿಸ್ ಪಾತ್ರದಲ್ಲಿ ಸಲ್ಮಾನ್ ಖಾನ್?
ತೆಲುಗು ನಿರ್ದೇಶಕ ವಂಶಿ ಪೈಡಿಪಲ್ಲಿ ಜೊತೆ ಸಲ್ಮಾನ್ ಖಾನ್ ಕೈಜೋಡಿಸಿರುವುದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಈ ಸಿನಿಮಾದಲ್ಲಿ ಸಲ್ಮಾನ್ ಖಾನ್ ಪೋಲಿಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ವಿಶೇಷವಾದ ಬೋಳು ತಲೆಯ ಲುಕ್ನಲ್ಲಿ ಮಿಂಚಲಿದ್ದಾರೆ ಎಂಬ ಸುದ್ದಿಗಳು ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಚಿತ್ರದಲ್ಲಿ ದಕ್ಷಿಣ ಭಾರತದ ಲೇಡಿ ಸೂಪರ್ಸ್ಟಾರ್ ನಯನತಾರಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಸಲ್ಮಾನ್ ಖಾನ್ ಅವರ ಫಸ್ಟ್ ಲುಕ್ ಅನ್ನು ಶೀಘ್ರದಲ್ಲೇ ನಿರ್ಮಾಪಕರು ಅನಾವರಣಗೊಳಿಸುವ ನಿರೀಕ್ಷೆಯಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.