Headlines

ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಖುಷಿ ಪಟ್ಟ ರಮೇಶ ಜಾರಕಿಹೊಳಿ – Kannada News | BJP MLA Ramesh jarkiholi happy for Missed KPCC President to Hi Brother Satish Jarkiholi

ದಾವಣಗೆರೆ, (ಜೂನ್ 14): ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನದಲ್ಲಿ ರೇಸ್​​ನಲ್ಲಿ ಸತೀಶ್ ಜಾರಕಿಹೊಳಿಗೆ (Satish Jarkiholi) ಕೊನೆ ಕ್ಷಣದಲ್ಲಿ ಕೈತಪ್ಪಿದೆ. ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನೀಡಲಾಗಿತ್ತು. ಆದ್ರೆ, ಸತೀಸ್ ಜಾರಕಿಹಿಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿದ್ದರು. ಹೀಗಾಗಿ ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟಕಟ್ಟಿದೆ. ಇನ್ನು ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ  ರಮೇಶ್ ಜಾರಕಿಹೊಳಿ (Ramesh Jarkiholi) ಖುಷಿ ಪಟ್ಟಿದ್ದಾರೆ.

ದಾವಣಗೆರೆಯಲ್ಲಿಂದು ಮಾತನಾಡಿದ ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಆಗದೇ ಇರುವುದು ಒಳ್ಳೆಯದಾಗಿದೆ. ಕಾರಣ 2028ಕ್ಕೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಸತೀಶ್ ಜಾರಕಿಹೊಳಿ ಕೆಪಿಸಿಸಿ ಆಧ್ಯಕ್ಷ ಆಗದೇ ಇರುವು ದೇವರೇ ಒಳ್ಳೆಯದನ್ನ ಮಾಡಿದ್ದಾನೆ. ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ನೀಡಿದ್ದರೇ ತೊಂದರೇ ನಮಗಾಗುತ್ತಿತ್ತು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *