ಸಾಕ್ಷಿದಾರನಿಗೆ ಬೆದರಿಕೆ ಹಾಕಿ ಅರೆಸ್ಟ್ ಆದ ಆ ಮೂವರು ದರ್ಶನ್ ಫ್ಯಾನ್ಸ್ ಇವರೇ ನೋಡಿ – Kannada News | Renukaswamy Murder Case: Darshan Fans Arrested for Witness Threat

ನಟ ದರ್ಶನ್ ಪ್ರಮುಖ ಆರೋಪಿಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ಪ್ರಮುಖ ಸಾಕ್ಷಿದಾರ ಸಂದೀಪ್ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂವರನ್ನು ದರ್ಶನ್ ಅಭಿಮಾನಿಗಳಾದ ಪುನೀತ್, ವೇಣು ಮತ್ತು ಸುಹಾಸ್ ಎಂದು ಗುರುತಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರ ಸಂದೀಪ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಕಾರ್ಯಪ್ರವೃತ್ತರಾದ ಪೊಲೀಸರು, ಸಂದೀಪ್ ಅವರಿಗೆ ಸಾಕ್ಷಿ ನುಡಿಯದಂತೆ ಬೆದರಿಕೆ ಹಾಕಿದ್ದ ಪುನೀತ್, ವೇಣು, ಸುಹಾಸ್ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಪುನೀತ್, ದರ್ಶನ್ ಫ್ಯಾನ್ ಪೇಜ್ ‘ಡಿ ಕಂಪನಿ’ಯ ಅಡ್ಮಿನ್ ಆಗಿದ್ದ. ರೇಣುಕಾಸ್ವಾಮಿ ಕೊಲೆ ಪ್ರಕರಣದ ನ್ಯಾಯಯುತ ತನಿಖೆಗೆ ಅಡ್ಡಿಪಡಿಸುವ ಪ್ರಯತ್ನ ಇದಾಗಿದೆ ಎಂದು ಹೇಳಲಾಗಿದೆ. ಈ ಬಂಧನವು ಪ್ರಕರಣದ ತನಿಖೆಗೆ ಹೊಸ ಆಯಾಮವನ್ನು ತಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

Leave a Reply

Your email address will not be published. Required fields are marked *