Headlines

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು – Kannada News | Minister ramalinga reddy Talks about Transport Employees Salary Hike And other matter after Meeting With CM

ಬೆಂಗಳೂರು, ಫೆಬ್ರವರಿ 18): ವಿವಿಧ ಬೇಡಿಕೆ ಈಡೇರಿಸುವಂತೆ ನಾಲ್ಕು ನಿಮಗದ ಸಾರಿಗೆ ನೌಕರರು (Transport Employees) ನಾಳೆ ಬೆಂಗಳೂರು ಚಲೋ ಪ್ರತಿಭಟನೆ ಕೈಗೊಂಡಿದ್ದಾರೆ. ಪ್ರತಿಭಟನೆಯಿಂದ ರಾಜ್ಯದಲ್ಲಿ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಸಾರಿಗೆ ನೌಕರರ ಬೇಡಿಕೆಗಳನ್ನ ಕೊಂಚ ಈಡೇರಿಸಲು ಮುಂದಾಗಿದೆ. ಹೌದು..ಸಾರಿಗೆ ನೌಕರರ ಬಹುದಿನಗಳ ಬೇಡಿಕೆಗೆ ಸರ್ಕಾರ (Congress Government) ಸ್ವಲ್ಪ ಸಂದನೆ ಮಾಡಿದೆ. ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿದ್ದು, ಅಂತಿಮವಾಗಿ ನೌಕರರ ಬೇಡಿಕೆ ಈಡೇರಿಗೆ ಒಪ್ಪಿಗೆ ಸೂಚಿಸಿದ್ದಾರೆ. ಇನ್ನು ಈ ಬಗ್ಗೆ ರಾಮಲಿಂಗಾ ರೆಡ್ಡಿ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆಗೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಗುಡ್​​ ನ್ಯೂಸ್: ಹಿಂಬಾಕಿ, ವೇತನ ಪರಿಷ್ಕರಣೆಗೆ ಆದೇಶ

Source link

Leave a Reply

Your email address will not be published. Required fields are marked *