ಬೆಂಗಳೂರು, ಆಗಸ್ಟ್ 13: ‘ಯಾವುದೇ ರಸ್ತೆಯಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕಾದರೆ ಕಡ್ಡಾಯವಾಗಿ ಪೂರ್ವಾನುಮತಿ ಮತ್ತು ಸೂಕ್ತ ದಾಖಲೆಗಳನ್ನು ಹೊಂದಿರಬೇಕು’ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಯಾರೇ ಆಗಲಿ ಅನುಮತಿ ತೆಗೆದುಕೊಂಡು ಕಾರ್ಯಕ್ರಮ ಮಾಡಬೇಕು. ಬೆಂಗಳೂರು ಅಥವಾ ಎಲ್ಲೇ ಆಗಲಿ, ಎಲ್ಲಾದರೂ ಕಾರ್ಯಕ್ರಮ ಮಾಡಬೇಕಾದರೆ ಅನುಮತಿ ತೆಗೆದುಕೊಳ್ಳಬೇಕು. ವಿಧಾನಸೌಧದಲ್ಲೂ ಕೃಷ್ಣಬೈರೇಗೌಡರು ಕಾರ್ಯಕ್ರಮ ಮಾಡುತ್ತಿದ್ದಾರೆ, ಅವರೂ ಪರ್ಮಿಷನ್ ತೆಗೆದುಕೊಂಡೇ ಮಾಡುತ್ತಿದ್ದಾರೆ ಅಲ್ವಾ, ಹಾಗೆಯೇ ಎಲ್ಲರೂ ಅನುಮತಿ ತೆಗೆದುಕೊಳ್ಳಬೇಕು’ ಎಂದು ಹೇಳಿದ್ದಾರೆ.
ವರದಿ: ಈರಣ್ಣ ಬಸವ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.