ಬೆಂಗಳೂರು, ಫೆ.21: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರುವರಿ 27 ಕೊನೆಯ ದಿನಾಂಕವಾಗಿದೆ.
ಕೆಇಎ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರ ಪ್ರಕಾರ, ಇದು ಅಭ್ಯರ್ಥಿಗಳಿಗೆ ನೀಡಲಾಗುತ್ತಿರುವ ಕೊನೆಯ ಅವಕಾಶವಾಗಿದೆ. ಈ ದಿನಾಂಕದ ನಂತರ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಇರುವುದಿಲ್ಲ. ಇದುವರೆಗೆ ಒಟ್ಟು 3.18 ಲಕ್ಷ ಅಭ್ಯರ್ಥಿಗಳು ಯಶಸ್ವಿಯಾಗಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಿದ್ದಾರೆ.
ಎಕ್ಸ್ ಪೋಸ್ಟ್ ಇಲ್ಲಿದೆ ನೋಡಿ:
#UGCET-26: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ #KEA, ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲಿದ್ದು, ಇದಕ್ಕೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಮತ್ತೊಮ್ಮೆ ಫೆಬ್ರುವರಿ 27ರವರೆಗೆ ವಿಸ್ತರಿಸಲಾಗಿದೆ. ಇದು ಕೊನೆಯ ಅವಕಾಶವಾಗಿದ್ದು, ಈ ಅವಧಿ ನಂತರ ಪುನಃ ದಿನಾಂಕ ವಿಸ್ತರಣೆ ಇರುವುದಿಲ್ಲ. ಹೀಗಾಗಿ… pic.twitter.com/tTFMiH4yv4
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) February 21, 2026
ಪ್ರಮುಖ ದಿನಾಂಕಗಳು:
ಆನ್‌ಲೈನ್ ನೋಂದಣಿ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-02-2026 ರ ರಾತ್ರಿ 11:59 ರವರೆಗೆ.
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 03-03-2026 ರ ಸಂಜೆ 5:30 ರವರೆಗೆ.
ಇದನ್ನೂ ಓದಿ: SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆ ಶುರುವಾಗುವ ಸಮಯ ವಿವರ
ಅರ್ಜಿ ಸಲ್ಲಿಸಿದವರ ಪೈಕಿ 2.18 ಲಕ್ಷ ಅಭ್ಯರ್ಥಿಗಳ ದಾಖಲೆಗಳನ್ನು ‘ಸ್ಯಾಟ್ಸ್’ (SATS) ಮೂಲಕ ಆನ್‌ಲೈನ್‌ನಲ್ಲಿ ಪರಿಶೀಲಿಸಲಾಗಿದೆ. ಇನ್ನು 1.08 ಲಕ್ಷ ಅಭ್ಯರ್ಥಿಗಳ ದಾಖಲೆಗಳನ್ನು ಕಾಲೇಜು ಹಂತದಲ್ಲಿ ಪರಿಶೀಲನೆ ನಡೆಸಲಾಗಿದೆ. ಅಭ್ಯರ್ಥಿಗಳು ಕೊನೆಯ ಕ್ಷಣದ ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ತಕ್ಷಣವೇ ಕೆಇಎ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA ತನ್ನ ಎಕ್ಸ್ ಖಾತೆಯಲ್ಲಿ ವಿವರವಾಗಿ ಹಂಚಿಕೊಂಡಿದೆ. ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.in, ಕೆಇಎ ವೆಬ್‌ಸೈಟ್‌ನ ‘UGCET 2026 Online Application’ ಲಿಂಕ್ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ತೊಂದರೆ ಎದುರಾದರೆ 080-23460460 ಸಂಖ್ಯೆಗೆ ಕರೆ ಮಾಡಬಹುದು ಅಥವಾ keaugcet2026@gmail.com ಗೆ ಇಮೇಲ್ ಮಾಡಬಹುದು.
