ಬೆಂಗಳೂರು, ಮೇ 28: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರ ನೀಡಿದ್ದೇನೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿ ಇಲ್ಲ. ಹಾಗಾಗಿ ಅವರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಮೊನ್ನೆ ಹೈಕಮಾಂಡ್ನವರು ರಾಜೀನಾಮೆ ಕೊಡಿ ಎಂದು ಹೇಳಿದ್ದರು. ಹೈಕಮಾಂಡ್ ಸೂಚಿಸಿದಾಗ ಅದಕ್ಕೆ ಸಮ್ಮತಿ ಸೂಚಿಸಿದ್ದೆ. ನಾಡಿದ್ದು ರಾಜೀನಾಮೆ ಕೊಡುತ್ತೇನೆ ಎಂದು ಅವರಿಗೆ ತಿಳಿಸಿದ್ದೆ. ಹಾಗಾಗಿ ಇಂದು ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿದ್ದೇನೆ ಎಂದವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
