ಬೆಂಗಳೂರು, ಮೇ 29: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ವಿಚಾರವಾಗಿ ವರಿಷ್ಠರಿಗೆ ಕರ್ನಾಟಕ ಕಾಂಗ್ರೆಸ್ನಲ್ಲಿ ಬಂಡಾಯದ ಭೀತಿ ಕಾಡಿತ್ತು. ಇದಕ್ಕೆ ಪೂರಕವೆಂಬಂತೆ ಬಿಜೆಪಿ ನಾಯಕರ ಸಂಪರ್ಕಿಸಲು ಕೆಲ ಕಾಂಗ್ರೆಸಿಗರು ಯತ್ನಿಸಿದ್ದ ಸುದ್ದಿ ತಿಳಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸಿತ್ತು. ಮಂಗಳವಾರದ ರಾತ್ರಿಯಿಂದ ಒತ್ತಡದಲ್ಲಿದ್ದ ಹೈಕಮಾಂಡ್ ನಾಯಕರು ಅದಕ್ಕಾಗಿಯೇ ರಣದೀಪ್ ಸುರ್ಜೇವಾಲ ಅವರನ್ನು ಕರ್ನಾಟಕಕ್ಕೆ ಕಳುಹಿಸಿದ್ದರು. ಕಾಂಗ್ರೆಸ್ ಶಾಸಕರ ಚಲನವಲನದ ಮೇಲೆ ಕಣ್ಣಿಟ್ಟಿಡುವ ಜೊತೆಗೆ ರಾಜೀನಾಮೆ ಬಳಿಕ ಸಿದ್ದರಾಮಯ್ಯರನ್ನು ದೆಹಲಿಗೆ ಕರೆತರುವಂತೆ ಸುರ್ಜೇವಾಲಾಗೆ ಸೂಚನೆ ನೀಡಲಾಗಿತ್ತು. ಅದರಂತೆ ಸಿದ್ದರಾಮಯ್ಯ ಜೊತೆಯಲ್ಲೇ ಸುರ್ಜೇವಾಲ ದೆಹಲಿಗೆ ತೆರಳಿದ್ದರು ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
