Headlines

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಬಿಜೆಪಿ ಬಾಗಿಲು ತಟ್ಟಿದ್ದ ಕೆಲ ಕಾಂಗ್ರೆಸಿಗರು!

ಬೆಂಗಳೂರು, ಮೇ 29: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ವಿಚಾರವಾಗಿ ವರಿಷ್ಠರಿಗೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಬಂಡಾಯದ ಭೀತಿ ಕಾಡಿತ್ತು. ಇದಕ್ಕೆ ಪೂರಕವೆಂಬಂತೆ ಬಿಜೆಪಿ ನಾಯಕರ ಸಂಪರ್ಕಿಸಲು ಕೆಲ ಕಾಂಗ್ರೆಸಿಗರು ಯತ್ನಿಸಿದ್ದ ಸುದ್ದಿ ತಿಳಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆಯನ್ನು ಕಾಂಗ್ರೆಸ್​​ ಹೈಕಮಾಂಡ್​​ ಸೂಕ್ಷ್ಮವಾಗಿ ಗಮನಿಸಿತ್ತು. ಮಂಗಳವಾರದ ರಾತ್ರಿಯಿಂದ ಒತ್ತಡದಲ್ಲಿದ್ದ ಹೈಕಮಾಂಡ್ ನಾಯಕರು ಅದಕ್ಕಾಗಿಯೇ ರಣದೀಪ್​ ಸುರ್ಜೇವಾಲ ಅವರನ್ನು ಕರ್ನಾಟಕಕ್ಕೆ ಕಳುಹಿಸಿದ್ದರು. ಕಾಂಗ್ರೆಸ್ ಶಾಸಕರ ಚಲನವಲನದ ಮೇಲೆ ಕಣ್ಣಿಟ್ಟಿಡುವ ಜೊತೆಗೆ ರಾಜೀನಾಮೆ ಬಳಿಕ ಸಿದ್ದರಾಮಯ್ಯರನ್ನು ದೆಹಲಿಗೆ ಕರೆತರುವಂತೆ ಸುರ್ಜೇವಾಲಾಗೆ ಸೂಚನೆ ನೀಡಲಾಗಿತ್ತು. ಅದರಂತೆ ಸಿದ್ದರಾಮಯ್ಯ ಜೊತೆಯಲ್ಲೇ ಸುರ್ಜೇವಾಲ ದೆಹಲಿಗೆ ತೆರಳಿದ್ದರು ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *