ಬೆಂಗಳೂರು, ಮೇ 25: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಬುಲಾವ್ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಅವರನ್ನು ಯಾಕೆ ಕರೆದಿದ್ದಾರೆ ಎಂಬುದು ತಮಗೆ ತಿಳಿದಿಲ್ಲ ಎಂದು ಡಿಕೆಶಿ ಹೇಳಿದ್ದಾರೆ. ಸಿಎಂ ನನಗೆ ಏನೂ ಹೇಳಿಲ್ಲ ಎಂದಿರುವ ಅವರು, ಹೈಕಮಾಂಡ್ನಿಂದ ತಮಗೆ ಕರೆ ಬಂದಿಲ್ಲ. ಕರೆದರೆ ಹೋಗುವುದಾಗಿ ತಿಳಿಸಿದ್ದಾರೆ. ಸಂಪುಟ ಪುನರಚನೆ ಅಥವಾ ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗಳಿಗೆ, ನನಗೆ ಗೊತ್ತಿಲ್ಲ ಎಂದು ಅವರು ಉತ್ತರಿಸಿದ್ದಾರೆ. ಸದ್ಯಕ್ಕೆ ಹೈಕಮಾಂಡ್ನಿಂದ ಇನ್ನಾವುದೇ ಮಾಹಿತಿ ಬಂದಿಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.