Headlines

ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಸ್ಪಷ್ಟನೆ ನೀಡಿದ ಸತೀಶ್ ಜಾರಕಿಹೊಳಿ – Kannada News | Minister Satish Jarkiholi clarify about distance maintained from Siddaramaiah

ಬೆಂಗಳೂರು, (ಜುಲೈ 08): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಡುವಿನ ಸಂಬಂಧ ಹಳಸಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.ಡಿಕೆ ಶಿವಕುಮಾರ್ ಅವರು ಸಿಎಂ ಆಗುತ್ತಿದ್ದಂತೆಯೇ ಸಿದ್ದರಾಮಯ್ಯ ಮತ್ತು ಸತೀಶ್ ಜಾರಕಿಹೊಳಿ ನಡುವೆ ಆತ್ಮೀಯತೆ ಇಲ್ಲ. ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎನ್ನವ ಗುಸು ಗುಸು ರಾಜ್ಯ ರಾಜಖಾರಣದಲ್ಲಿ ಹರಿದಾಡುತ್ತಿದೆ.  ಸಿದ್ದರಾಮಯ್ಯನವರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲು ಸತೀಶ್ ಜಾರಕಿಹೊಳಿ ಅವರು ಸಹಿ ಸಂಗ್ರಹಿಸಿದ್ದರು ಎನ್ನುವ ಆರೋಪ ಕೇಳಿಬಂದಿದ್ದವು. ಇದು ಇಬ್ಬರು ನಾಯಕರ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ, ಸತೀಶ್ ದೂರ ಇರುವ ವಿಡಿಯೋವೊಂದು ವೈರಲ್ ಆಗಿದೆ.

ಇದಕ್ಕೆ ಇದೀಗ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದು, ಹಿಂದಿನ ಎಲ್ಲಾ ವಿಡಿಯೋಗಳನ್ನು ನೋಡಿದರೂ ಹಾಗೆಯೇ ಇವೆ. ಹಿಂದೆ ಹೇಗೆ ಇದ್ದೇವೆಯೋ ಈಗಲೂ ನಾವು ಹಾಗಿಯೇ ಇದ್ದೇವೆ. ನಿನ್ನೆ ಕಾರ್ಯಕ್ರಮದಲ್ಲಿ ಸೀನಿಯರ್ ಬರ್ತಾರೆಂದು ಕುಳಿತಿರಲಿಲ್ಲ. 10 ವರ್ಷದಿಂದ ಸಿದ್ದರಾಮಯ್ಯ ಹೇಗಿದ್ದಾರೋ ಈಗಲೂ ಹಾಗೆ ಇದ್ದಾರೆ. ಜೊತೆಯಲ್ಲಿ ಕೂತಿಲ್ಲ ಅಂದಾಕ್ಷಣ ಮಾತನಾಡಲ್ಲ ಅನ್ನೋದು ಸರಿಯಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ ಅಂತೆ-ಕಂತೆಗಳಿಗೆ ತೆರೆ ಎಳೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *