ಸಿದ್ದರಾಮಯ್ಯ ಆಪ್ತರಿಂದ ಸಭೆ, ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ: ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು – Kannada News | Karnataka Congress Internal Rift: CM Siddaramaiah’s Loyalists Hold Secret Meeting Amid Leadership Change Rumors

ಬೆಂಗಳೂರು, ಏಪ್ರಿಲ್ 24: ದಾವಣಗೆರೆ ಉಪಚುನಾವಣೆ ಬೆಳವಣಿಗಗಳ ಬಳಿಕ ಕರ್ನಾಟಕ ಕಾಂಗ್ರೆಸ್‌ನಲ್ಲಿ ಆಂತರಿಕ ಅಸಮಾಧಾನ ಮತ್ತೆ ಭುಗಿಲೆದ್ದಿದೆ. ಪಕ್ಷದಲ್ಲಿ ನಡೆಯುತ್ತಿರುವ ಏಕಪಕ್ಷೀಯ ನಿರ್ಧಾರಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌನದ ಬಗ್ಗೆ ಅವರ ಆಪ್ತ ಸಚಿವರು ಸಭೆ ನಡೆಸಿ ಚರ್ಚೆ ಮಾಡಿದ್ದಾರೆ. ಬೆಂಗಳೂರಿನ ಕನ್ನಿಂಗ್ಹ್ಯಾಮ್ ರಸ್ತೆಯ ಖಾಸಗಿ ಕಟ್ಟಡದಲ್ಲಿ ಸಚಿವರಾದ ಭೈರತಿ ಸುರೇಶ್, ಡಾ. ಜಿ. ಪರಮೇಶ್ವರ, ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಮತ್ತು ದಿನೇಶ್ ಗುಂಡುರಾವ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರ ಅಸ್ತಿತ್ವಕ್ಕೆ ಕುತ್ತು ಬರುವ ಸಾಧ್ಯತೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲಾಯಿತು. 2028ರ ಚುನಾವಣೆಯಲ್ಲಿ ಸಮುದಾಯಗಳು ದೂರ ಸರಿಯುವ ಆತಂಕವೂ ಚರ್ಚೆಗೆ ಬಂದಿದೆ. ಈ ಬೆಳವಣಿಗೆಗಳ ನಡುವೆ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ದೆಹಲಿಗೆ ತೆರಳಿದ್ದು ತೀವ್ರ ಚರ್ಚೆಗೆ ಕಾರಣವಾಗಿದೆ. ಡಿಕೆ ಶಿವಕುಮಾರ್ ಅವರು ಸಿಎಂ ಆಪ್ತರ ಸಭೆ ಬಗ್ಗೆ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್‌ನ ಈ ಆಂತರಿಕ ಬೆಳವಣಿಗೆಗಳಿಗೆ ವಿಪಕ್ಷ ನಾಯಕರು ‘ಹುಡುಗಾಟಿಕೆಯ ರಾಜಕಾರಣ’ ಎಂದು ಟೀಕಿಸಿದ್ದು, ಮೂರು-ನಾಲ್ಕು ತಿಂಗಳಲ್ಲಿ ಸ್ಪೋಟಕ ಬೆಳವಣಿಗೆಗಳು ಆಗಲಿವೆ. ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಉಪಚುನಾವಣೆಗೂ ಮುನ್ನ ಕೊಂಚ ಸದ್ದಡಗಿದ್ದ ಸಿಎಂ ಕುರ್ಚಿ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *