ಕೊಪ್ಪಳ, ಮೇ 16: ನನಗೆ ಗೊತ್ತಿರುವ ಮಟ್ಟಿಗೆ ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ. ಇದು ನನ್ನ ನಂಬಿಕೆ. ಒಂದು ವೇಳೆ ಸಿಎಂ ಬದಲಾವಣೆ ಮಾಡುವ ಅನಿವಾರ್ಯತೆ ಎದುರಾದರೆ, ಸಿದ್ದರಾಮಯ್ಯ ಬಿಟ್ಟರೆ ಸಿಎಂ ಆಗುವ ಅರ್ಹತೆ ಇರುವುದು ಮಲ್ಲಿಕಾರ್ಜುನ ಖರ್ಗೆಗೆ ಮಾತ್ರ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವರಿಷ್ಠರು ಬದಲಾವಣೆ ಮಾಡಬೇಕು ಅಂದರೆ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು, ಆದರೆ ಆ ಪರಿಸ್ಥಿತಿ ಉದ್ಭವಿಸಿಲ್ಲ. ಮೇ 30ರೊಳಗೆ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಮಾಡಬಹುದು. ಮೂರು ವರ್ಷ ಆಯ್ತು, ಸಂಪುಟದಲ್ಲಿ ಹೊಸಬರಿಗೆ ಅವಕಾಶ ಕೊಡಬೇಕು. ಜನಪರ ಆಡಳಿತ ಕೊಟ್ರೆ 2028ರಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೆ ಬರಲು ಸಹಾಯ ಆಗುತ್ತೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.