ಚಿತ್ರದುರ್ಗ, (ಡಿಸೆಂಬರ್ 25): ಜಿಲ್ಲೆಯ ಹಿರಿಯೂರು (Hiriyuru) ಬಳಿ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಲ್ಲಿ ಹಲವು ಸಾವು ನೋವು ಸಂಭವಿಸಿವೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟ್ಟಿದ್ದ ಸಿಬರ್ಡ್ ಬಸ್ ಗೆ ಲಾಡಿ ಬಂದು ಗುದ್ದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಸುಟ್ಟು ಕರಕಲಾಗಿದೆ. ದುರಂತದಲ್ಲಿ ಈವರೆಗೂ ಐವರ ಮೃತದೇಹಗಳು ಪತ್ತೆಯಾಗಿದ್ದು, ಕೆಲವರು ದುರಂತ ಗಾಯಗೊಂಡಿದ್ದಾರೆ. ಆದ್ರೆ, ಒಟ್ಟು ಎಷ್ಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನುವ ನಿಖರ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸ್, ಸೋಕೋ ತಂಡ ಪರಿಶೀಲನೆ ನಡೆಸಿದೆ. ಇನ್ನು ಈ ದುರಂತದಿಂದ ಹಲವು ಗ್ರೇಟ್ ಎಸ್ಕೇಪ್ ಆಗಿದ್ದು, ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕವಾಗಿದೆ. ಹಾಗಾದ್ರೆ, ಯಾರೆಲ್ಲಾ ಹೇಗೆ ಜೀವ ಉಳಿಸಿಕೊಂಡಿದ್ದಾರೆ ಎನ್ನುವುದನ್ನು ನೋಡಿ.
