
ದಾವಣಗೆರೆ, ಏಪ್ರಿಲ್ 01: ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ಗಳ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅನಗತ್ಯವಾಗಿ ಗ್ರಾಹಕರು ಕ್ಯೂ ನಿಲ್ಲುವ ಅಗತ್ಯವಿಲ್ಲ, ಏಕೆಂದರೆ ಬೇಕಾದಷ್ಟು ಎಲ್ಪಿಜಿ ಸಿಲಿಂಡರ್ಗಳು ಲಭ್ಯವಿವೆ ಎಂದು ಅವರು ತಿಳಿಸಿದ್ದಾರೆ. ವಿಶೇಷವಾಗಿ ಎಲ್ಪಿಜಿ ಆಟೋರಿಕ್ಷಾಗಳಿಗೆ ಪ್ರತಿದಿನ 3000 ಸಿಲಿಂಡರ್ಗಳು ಖರ್ಚಾಗುತ್ತಿದ್ದು, ಇಂಡಿಯನ್ ಆಯಿಲ್ ಕಾರ್ಪೊರೇಷನ್, ಬಿಪಿಎಲ್ ಮತ್ತು ಎಚ್ಪಿಸಿಎಲ್ ಕಂಪನಿಗಳಿಂದ ಸಮರ್ಪಕವಾಗಿ ಪೂರೈಕೆಯಾಗುತ್ತಿವೆ. ಎಲ್ಲಿಯೂ ಯಾವುದೇ ಕೊರತೆ ಇಲ್ಲ ಎಂದು ಸಚಿವರು ಹೇಳಿದ್ದಾರೆ. ಖಾಸಗಿ ಗ್ಯಾಸ್ ಏಜೆನ್ಸಿಗಳು ಗೊಂದಲಕ್ಕೆ ಕಾರಣವಾಗಿದ್ದು, ಅವು ಎಲ್ಪಿಜಿ ದರವನ್ನು ಹೆಚ್ಚಿಸಿವೆ. ಈ ಸಂಬಂಧ ಪೆಟ್ರೋಲಿಯಂ ಸಚಿವರಿಗೆ ಮನವಿ ಮಾಡಿದ್ದು, ಖಾಸಗಿಯವರೂ ಸಹ ಸರ್ಕಾರ ನಿಗದಿಪಡಿಸಿದ ದರದಲ್ಲೇ ಎಲ್ಪಿಜಿ ಪೂರೈಸಬೇಕು ಎಂದು ಮುನಿಯಪ್ಪ ಒತ್ತಾಯಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.