ಕೇರಳ ಫೆ.20: ಮಡಕ್ಕಲ್ ಜಂಕ್ಷನ್‌ನಲ್ಲಿ (Madakkal Junction) ನಡೆದ ಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸ್ಕೂಟರ್ನಲ್ಲಿ ಬಂದ ಮಹಿಳೆಯೊಬ್ಬರಿಗೆ ರಸ್ತೆ ಕ್ರಾಸ್ ಮಾಡುವ ವೇಳೆ, ವೇಗವಾಗಿ ಬಂದ ಕೆಂಪು ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಎತ್ತರಕ್ಕೆ ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ. ಈ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅಪಘಾತದ ಭೀಕರತೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆ, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ವಿಡಿಯೋ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
