ರಾಮನಗರ, ಏಪ್ರಿಲ್ 19: ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಸುಣ್ಣಘಟ್ಟ ಗ್ರಾಮ ಸಮೀಪ ಮೂರು ಕಾಡಾನೆಗಳು ಪ್ರತ್ಯಕ್ಷವಾಗಿವೆ.ಗ್ರಾಮದ ಶಿವಶಂಕರ್ ಎಂಬುವರ ತೋಟದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಭೀತಿ ಉಂಟಾಗಿದೆ. ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಾಡಾನೆಗಳನ್ನು ಸುರಕ್ಷಿತವಾಗಿ ಕಾಡಿಗೆ ಹಿಮ್ಮೆಟ್ಟಿಸಲು ಸಿಬ್ಬಂದಿ ಕ್ರಮ ಕೈಗೊಂಡಿದ್ದು, ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾರಿಗೂ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ