ಬೆಂಗಳೂರು, ಆಗಸ್ಟ್ 07: ಪ್ರಸ್ತಾಪಿತ ಕಿರು ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದೆ. ಆರ್.ಕೆ. ಗುರುಪ್ರಸಾದ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಈ ಕುರಿತು ಮಾಹಿತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಯೋಜನೆಯಿಂದ ಹೆಬ್ಬಾಳ ಕೆರೆಗೆ ನೀರಿನ ಹರಿವಿಗೆ ಅಡಚಣೆ ಉಂಟಾಗುತ್ತದೆಯೇ ಮತ್ತು ಈ ಬಗ್ಗೆ ಯಾವುದೇ ಅಧ್ಯಯನ ನಡೆಸಲಾಗಿದೆಯೇ ಎಂಬ ಬಗ್ಗೆ ನ್ಯಾಯಾಲಯವು ಸ್ಪಷ್ಟೀಕರಣ ಕೇಳಿದೆ. ಜೊತೆಗೆ ಹೈಕೋರ್ಟ್ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ), ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ಬಿಎಂಎಲ್ಟಿಎ) ಮತ್ತು ಕೆರೆ ಸಂರಕ್ಷಣಾ ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಈ ಯೋಜನೆಗೆ ಸಂಬಂಧಿಸಿದ ರಿತ್ವಿಕ್ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೂ ನೋಟಿಸ್ ನೀಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.