ಹಡಗುಗಳು ಹಾರ್ಮುಜ್ ಜಲಸಂಧಿ ದಾಟಲು 18 ಕೋಟಿ ರೂ. ಟೋಲ್ ಕಟ್ಬೇಕಾ?

ಹಡಗುಗಳು ಹಾರ್ಮುಜ್ ಜಲಸಂಧಿ ದಾಟಲು 18 ಕೋಟಿ ರೂ. ಟೋಲ್ ಕಟ್ಬೇಕಾ?

ಟೆಹ್ರಾನ್, ಮಾರ್ಚ್​ 23: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮಧ್ಯೆ, ಇರಾನ್(Iran) ಹಾರ್ಮುಜ್ ಜಲಸಂಧಿಗೆ ಸಂಬಂಧಿಸಿದಂತೆ ಹೊಸ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸುತ್ತಿದೆ. ಜಾಗತಿಕ ವ್ಯಾಪಾರ ಮತ್ತು ಕಡಲ ಆರ್ಥಿಕತೆಯ ದಿಕ್ಕನ್ನು ಬದಲಾಯಿಸಬಹುದಾದ ಯೋಜನೆಯಲ್ಲಿ ಇರಾನ್ ಕಾರ್ಯನಿರ್ವಹಿಸುತ್ತಿದೆ. ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಸುಂಕ ಅಥವಾ ಸಾರಿಗೆ ಶುಲ್ಕ ವಿಧಿಸಲು ಇರಾನ್ ಮುಂದಾಗಿದೆ. ಸುಮಾರು 18 ಕೋಟಿ ರೂ. ಶುಲ್ಕ ಕಟ್ಟಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಹಾರ್ಮುಜ್ ನೆಪ ಇಟ್ಟುಕೊಂಡು ಇರಾನ್ ಇಡೀ ಜಗತ್ತನ್ನು ಬ್ಲ್ಯಾಕ್​ಮೇಲ್ ಮಾಡಲು ಮುಂದಾದಂತೆ ಕಾಣುತ್ತಿದೆ.

ಈ ಪ್ರಸ್ತಾಪವು ಜಾರಿಗೆ ಬಂದರೆ, ಜಾಗತಿಕ ತೈಲ, ಅನಿಲ ಮತ್ತು ವ್ಯಾಪಾರ ಪೂರೈಕೆ ಸರಪಳಿಗಳ ಮೇಲೆ ಪರಿಣಾಮ ಬೀರಬಹುದು.ವಾಸ್ತವವಾಗಿ, ಹಾರ್ಮುಜ್ ಜಲಸಂಧಿಯು ವಿಶ್ವದ ಪ್ರಮುಖ ಸಮುದ್ರ ಮಾರ್ಗಗಳಲ್ಲಿ ಒಂದಾಗಿದೆ. ಜಾಗತಿಕ ತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಸರಿಸುಮಾರು ಶೇ.20 ಇದರ ಮೂಲಕ ಹಾದುಹೋಗುತ್ತದೆ. ಆದ್ದರಿಂದ ಈ ಪ್ರದೇಶದಲ್ಲಿನ ಯಾವುದೇ ಬದಲಾವಣೆಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.

ಪಶ್ಚಿಮ ಏಷ್ಯಾದಲ್ಲಿ ಇತ್ತೀಚೆಗೆ ಉಂಟಾದ ಉದ್ವಿಗ್ನತೆ, ವಿಶೇಷವಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹೆಚ್ಚುತ್ತಿರುವ ಸಂಘರ್ಷದ ನಂತರ ಪರಿಸ್ಥಿತಿ ಹೆಚ್ಚು ಸೂಕ್ಷ್ಮವಾಗಿದೆ. ಕತಾರ್ ಹಾಗೂ ಇರಾನ್ ನಡುವೆ ಇರುವ ಸೌತ್ ಪಾರ್ಸ್​ ಅನಿಲ ಘಟಕವು ಮಹತ್ವದ್ದಾಗಿದೆ. ಇದನ್ನು ವಿಶ್ವದ ಅತಿದೊಡ್ಡ ನೈಸಗರ್ಗಕ ಅನಿಲ ನಿಕ್ಷೇಪವೆಂದು ಪರಿಗಣಿಸಲಾಗಿದೆ.

ಮತ್ತಷ್ಟು ಓದಿ: ಇರಾನ್ ಅಧ್ಯಕ್ಷರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ; ನೌರುಜ್​ನಲ್ಲಿ ಮೂಲಸೌಕರ್ಯದ ಮೇಲಿನ ದಾಳಿಗೆ ಖಂಡನೆ

ಈ ತಂತ್ರವು ಸಾಂಪ್ರದಾಯಿಕ ಯುದ್ಧದಿಂದ ಆರ್ಥಿಕ ಯುದ್ಧಕ್ಕೆ ಬದಲಾಗಬಹುದು ಎಂದು ತಜ್ಞರು ಹೇಳುತ್ತಾರೆ. ನಿರ್ಣಾಯಕ ಜಲಮಾರ್ಗವನ್ನು ನಿಯಂತ್ರಿಸುವ ಹೊಸ ವಿಧಾನವನ್ನು ಗುರುತಿಸುವ ಮೂಲಕ ಭಾರಿ ಪ್ರಮಾಣದ ಸುಂಕವನ್ನು ಈಗಾಗಲೇ ಜಾರಿಗೆ ತರಲಾಗಿದೆ ಎಂದು ಸಂಸತ್ತಿನ ರಾಷ್ಟ್ರೀಯ ಭದ್ರತಾ ಸಮಿತಿಯ ಸದಸ್ಯರಾಗಿರುವ ಇರಾನಿನ ಶಾಸಕ ಅಲಾಯೆದ್ದೀನ್ ಬೊರೊಜೆರ್ಡಿ ತಿಳಿಸಿದ್ದಾರೆ.

48 ಗಂಟೆಗಳ ಒಳಗೆ ಜಲಸಂಧಿಯನ್ನು ಮತ್ತೆ ತೆರೆಯದಿದ್ದರೆ, ಅಮೆರಿಕವು ಇರಾನ್‌ನ ವಿದ್ಯುತ್ ಮೂಲಸೌಕರ್ಯವನ್ನು ಗುರಿಯಾಗಿಸಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದ ಬೆನ್ನಲ್ಲೇ ಬೊರೊಜೆರ್ಡಿ ಅವರ ಹೇಳಿಕೆಗಳು ಬಂದಿವೆ. ಇರಾನ್ ವಿರೋಧಿಗಳನ್ನು ಹೊರತುಪಡಿಸಿ ಉಳಿದ ದೇಶಗಳಿಗೆ ಹಾರ್ಮುಜ್ ಜಲಸಂಧಿ ಮುಕ್ತವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಜಾಗತಿಕ ತೈಲ ಪೂರೈಕೆಯ ಸರಿಸುಮಾರು ಐದನೇ ಒಂದು ಭಾಗವು ಅದರ ಮೂಲಕ ಹಾದುಹೋಗುತ್ತದೆ, ಆದರೆ ಹಡಗುಗಳ ಮೇಲಿನ ದಾಳಿಗಳು ಬಹುತೇಕ ಎಲ್ಲಾ ಟ್ಯಾಂಕರ್‌ಗಳ ಸಂಚಾರವನ್ನು ನಿಲ್ಲಿಸಿವೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *