ಹಬ್ಬಕ್ಕೆ ಊರಿಗೆ ಹೊರಟ ಜನ: ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ

ಹಬ್ಬಕ್ಕೆ ಊರಿಗೆ ಹೊರಟ ಜನ: ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ

ಬೆಂಗಳೂರು, ಮಾರ್ಚ್ 19: ಯುಗಾದಿ, ರಂಜಾನ್ ಹಬ್ಬ ಮತ್ತು ಸುದೀರ್ಘ ವಾರಾಂತ್ಯ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಊರಿನತ್ತ ತೆರಳುವ ಪ್ರಯಾಣಿಕರಿಂದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬುಧವಾರ ರಾತ್ರಿ ಭಾರಿ ಜನಸಂದಣಿ ಕಂಡುಬಂದಿದೆ. ಬಸ್ಸುಗಳು ಕೂಡ ಪ್ರಯಾಣಿಕರಿಂದ ತುಂಬಿ ತುಳುಕುತ್ತಿರುವುದು ಕಂಡುಬಂದಿದೆ. ಸೀಟು ಸಿಗದೆ ಪರದಾಡುತ್ತಿರುವ ಜನರು, ಲಗೇಜ್ ಸಮೇತವಾಗಿ ರಾತ್ರಿಯಿಡೀ ನಿಲ್ದಾಣದಲ್ಲೇ ಜಾಗರಣೆ ಮಾಡುವಂತಾಯಿತು.

ಜನರು ಊರಿಗೆ ಹೋಗಲು ಮೆಜೆಸ್ಟಿಕ್​ನತ್ತ ಧಾವಿಸಿದ್ದರಿಂದ ಕಾರ್ಪೊರೇಷನ್ ರಸ್ತೆ, ಮೈಸೂರು ಬ್ಯಾಂಕ್ ರಸ್ತೆ ಮತ್ತು ಕೆ.ಆರ್. ಮಾರ್ಕೆಟ್ ರಸ್ತೆ ಸೇರಿದಂತೆ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಯಿತು. ಹೆಚ್ಚುವರಿ ವಾಹನಗಳು ರಸ್ತೆಗಿಳಿದಿದ್ದರ ನಡುವೆ ಸಂಜೆ ಸುರಿದ ಮಳೆಯೂ ಟ್ರಾಫಿಕ್ ಸಮಸ್ಯೆ ಹೆಚ್ಚಿಸಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *