ದಾವಣಗೆರೆ, ಮೇ 05: ಜಿಲ್ಲೆಯ ಹರಿಹರದಲ್ಲಿರುವ ಪಂಚಮಸಾಲಿ ಮಠದ ಆವರಣದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಪೀಠಾಧಿಪತ್ಯಕ್ಕೆ ಸಂಬಂಧಿಸಿದ ವಿವಾದ ಮತ್ತು ಮಠದ ಆವರಣದಲ್ಲಿ ಪದೇಪದೆ ನಡೆಯುತ್ತಿದ್ದ ಗಲಾಟೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತವು ಮಠದ ಗೇಟ್‌ಗಳನ್ನು ಬಂದ್ ಮಾಡಿ, ನಿಷೇಧಾಜ್ಞೆಯ ಬ್ಯಾನರ್‌ಗಳನ್ನು ಅಳವಡಿಸಿದೆ. ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಚನಾನಂದ ಸ್ವಾಮೀಜಿ ಅವರಿಗೂ ನೋಟಿಸ್ ನೀಡಿದ್ದಾರೆ. ಪಂಚಮಸಾಲಿ ಮಠದಲ್ಲಿ ಶಾಂತಿ ಕದಡದಂತೆ ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರಿಸ್ಥಿತಿ ಶಾಂತಿಯುತವಾಗುವವರೆಗೂ ನಿಷೇಧಾಜ್ಞೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.