ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ! ತೀವ್ರ ಸ್ವರೂಪ ಪಡೆದುಕೊಂಡ ಲೆಕ್ಕ ಕೊಡಿ ಅಭಿಯಾನ

ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ! ತೀವ್ರ ಸ್ವರೂಪ ಪಡೆದುಕೊಂಡ ಲೆಕ್ಕ ಕೊಡಿ ಅಭಿಯಾನ

ದಾವಣಗೆರೆ, ಏಪ್ರಿಲ್ 13: ಹರಿಹರ ಪಂಚಮಸಾಲಿ ಪೀಠದ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದಿದೆ. ಪಂಚಮಸಾಲಿ ಗುರುಪೀಠದ ಧರ್ಮದರ್ಶಿ ಮಂಡಳಿ ಹಾಗೂ ಭಕ್ತರ ನಡುವಿನ ಸಂಘರ್ಷ ಮಠದ ಆವರಣದಲ್ಲಿ ಹೈಡ್ರಾಮಾ ಸೃಷ್ಟಿಸಿದೆ. ಹೀಗಾಗಿ ಮಠದ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೀಠದ ಆಡಳಿತ ಮತ್ತು ನಡೆಯ ಬಗ್ಗೆ ಲೆಕ್ಕಪತ್ರ ನೀಡುವಂತೆ ಭಕ್ತರು ಆಗ್ರಹಿಸಿದ್ದಾರೆ.

ಮಾಜಿ ಶಾಸಕರಾದ ಹೆಚ್​.ಎಸ್.ಶಿವಶಂಕರ, ಅರುಣಕಮಾರ್, ಹೂವಿನ ಹಡಗಲಿಯ ಹಾಲಪ್ಪ ಸೇರಿ ಪ್ರಮುಖರಿಂದ ಪ್ರತಿಭಟನೆ ನಡೆದಿದ್ದು, ಪೀಠದ ಆಡಳಿತದಲ್ಲಿ ಪಾರದರ್ಶಕತೆಯ ಕೊರತೆಯನ್ನು ಎತ್ತಿ ಹಿಡಿದಿದೆ. ಈ ವೇಳೆ ತಹಶೀಲ್ದಾರ್ ಸಂತೋಷ್ ಕುಮಾರ್ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಭಕ್ತರನ್ನು ಮಠದ ಗೇಟ್ ಬಳಿಯೇ ತಡೆದಿದ್ದಾರೆ. ಅಲ್ಲದೆ 100ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *