ಹಸುಗಳಿಂದ ಟ್ರಾಫಿಕ್​​ ಜಾಮ್​​ ಆಗಿದ್ದಕ್ಕೆ ಅವುಗಳ ಮಾಲೀಕನ ಮೇಲೆ FIR!: ಏರ್​ಪೋರ್ಟ್ ಸಂಚಾರ ಠಾಣೆಯಲ್ಲಿ ಪ್ರಕರಣ – Kannada News | Bengaluru: FIR Filed Against Cow Owner After Cattle Cause Traffic Gridlock on Ring Road

ಹಸುಗಳ ಮಾಲೀಕನ ಮೇಲೆ FIR!
Image Credit source: Tv9 Kannada

ಬೆಂಗಳೂರು, ಆಗಸ್ಟ್​​ 11: ಬೆಂಗಳೂರು (Bengaluru) ಎಂದಾಕ್ಷಣ ಮೊದಲಿಗೆ ನೆನಪಾಗೋದೇ ನಗರದಲ್ಲಿನ ಟ್ರಾಫಿಕ್ (Traffic)​​ ಸಮಸ್ಯೆ. ವಾಹನದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ, ಜಿಬಿಎಯಿಂದ ಸಾಕಷ್ಟು ಕ್ರಮಗಳ ಹೊರತಾಗಿಯೂ ಸಂಚಾರ ಸಮಸ್ಯೆಗಳು ಮಾತ್ರ ಬಗೆಹರಿದಿಲ್ಲ. ಈ ನಡುವೆ ಸಾರ್ವಜನಿಕರು ಹುಬ್ಬೇರಿಸುವಂತಹ ಘಟನೆಯೊಂದು ಬೆಂಗಳೂರಲ್ಲಿ ನಡೆದಿದೆ. ಹಸುಗಳಿಂದ ಟ್ರಾಫಿಕ್​​ ಜಾಮ್​​ ಉಂಟಾಗಿರುವ ಕಾರಣಕ್ಕೆ ಅವುಗಳ ಮಾಲೀಕನ ವಿರುದ್ಧ ಏರ್​ಪೋರ್ಟ್ ಸಂಚಾರ ಠಾಣೆಯಲ್ಲಿ ಪ್ರಕರಣ (ಎಫ್​​ಐಆರ್​)​ ದಾಖಲಾಗಿದೆ.

ಏನಿದು ಪ್ರಕರಣ?

ಆಗಸ್ಟ್​​ 10ರ ಬೆಳಿಗ್ಗೆ ಕಳಾಮಂದಿರ ಹತ್ತಿರದ ರಿಂಗ್ ರಸ್ತೆಯಲ್ಲಿ ಸುಮರು 9 ರಿಂದ 10 ಹಸುಗಳು ರಸ್ತೆಯಲ್ಲಿ ಓಡಾಡಿಕೊಂಡಿದ್ದವು. ಈ ಕಾರಣದಿಂದ ರಸ್ತೆಯಲ್ಲಿ ಸಂಚರಿಸುವ ಇತರೆ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಹೀಗಾಗಿ ಈ ರೀತಿಯ ಘಟನೆಗಳು ಆಗದಂತೆ ಮುನ್ನೆಚ್ಚರಿಕೆ ವಹಿಸದ ಕಾರಣ ಮಾರತ್ತಹಳ್ಳಿಯ ಅಶ್ವಥನಗರ ನಿವಾಸಿಯಾಗಿರುವ ಹಸುಗಳ ಮಾಲೀಕ ಸಂತೋಷ್​​ ಎಂಬವರಿಗೆ ಪೊಲೀಸರು ಶಾಕ್​​ ಕೊಟ್ಟಿದ್ದಾರೆ. ಹಸುಗಳನ್ನು ರಸ್ತೆಯಲ್ಲಿ ಬಿಟ್ಟು ಇತರೆ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗಲು ಕಾರಣರಾಗಿದ್ದಾರೆ ಎಂದು ಅವರ ವಿರುದ್ಧ ಎಫ್​​ಐಆರ್​​ ದಾಖಲಿಸಲಾಗಿದೆ.

ಇದನ್ನೂ ಓದಿ: ಕಂಠೀರವ ಸ್ಟುಡಿಯೋ ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರ ಸಾವು

ದೂರು ನೀಡಿದ್ದ ಪೊಲೀಸ್​​ ಸಿಬ್ಬಂದಿ

ಘಟನೆ ನಡೆದಿರುವ ದಿನ ರಿಂಗ್ ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ HAL ಏರ್ಪೋರ್ಟ್​​ ಸಂಚಾರ ಪೊಲೀಸ್‌ ಠಾಣೆಯ ಸಿಬ್ಬಂದಿ ನಾಗೇಂದ್ರ ಎಂಬವರು ಈ ಸಂಬಂಧ ದೂರು ದಾಖಲಿಸಿದ್ದರು. ಅದರನ್ವಯ ಹಸುಗಳ ಮಾಲೀಕ ಸಂತೋಷ್​​ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023, (U/S 285) ಅಡಿ ಸಂಚಾರಕ್ಕೆ ಅಡಚಣೆ ಉಂಟು ಮಾಡಿದಕ್ಕೆ ಕೇಸ್ ದಾಖಲು ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *