Headlines

ಹಾರರ್ ಚಿತ್ರಕ್ಕಾಗಿ ‘ಮೈತ್ರಿ ಮೂವೀ ಮೇಕರ್ಸ್’ ಜೊತೆ ಕೈ ಜೋಡಿಸಿದ ಪ್ರಶಾಂತ್ ನೀಲ್ – Kannada News | Mythri Movie Makers Prashanth Neel horror movie 418 title revealed

ಟಾಲಿವುಡ್‌ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್’ (Mythri Movie Makers) ದೊಡ್ಡ ಮಟ್ಟದ ಕಮರ್ಷಿಯಲ್ ಚಿತ್ರಗಳಿಗೆ ಹೆಸರಾಗಿದೆ. ಇದೀಗ ಇದೇ ಮೊದಲ ಬಾರಿಗೆ ಈ ಸಂಸ್ಥೆ ಹಾರರ್ ಜಗತ್ತಿಗೆ ಕಾಲಿಟ್ಟಿದೆ. ಹೊಸ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಿದೆ. ಈ ಚಿತ್ರಕ್ಕೆ ‘418’ ಎಂದು ಹೆಸರಿಡಲಾಗಿದ್ದು, ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕೆಜಿಎಫ್ ಮತ್ತು ಸಲಾರ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ ಎಂಬುದು ವಿಶೇಷ. ಪ್ರಶಾಂತ್ ನೀಲ್ ಅವರ ಗರಡಿಯಲ್ಲಿ ಪಳಗಿದ ಕೀರ್ತನ್ ನಾಡಗೌಡ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಹಾರರ್ ಸಿನಿಮಾಗಳು ಅಂದ್ರೆ ಅಲ್ಲಿ ಕಾಮಿಡಿ ಕೂಡ ಬೆರೆತಿರುತ್ತಿತ್ತು. ಆದರೆ ‘418’ ಸಿನಿಮಾ ಈ ಸಂಪ್ರದಾಯವನ್ನು ಮುರಿಯಲು ಹೊರಟಿದೆ. ಚಿತ್ರದ ಪೋಸ್ಟರ್ ಹಂಚಿಕೊಂಡಿರುವ ಚಿತ್ರತಂಡ, ‘ಹಾರರ್ ಸಿನಿಮಾಗಳಲ್ಲಿ ನಗಿಸಿದ್ದು ಸಾಕು, ಈಗ ಹೆದರುವ ಸಮಯ’ ಎಂಬ ಪಂಚ್ ಲೈನ್ ನೀಡುವ ಮೂಲಕ ಇದೊಂದು ಕಂಪ್ಲೀಟ್ ಭಯಾನಕ ಚಿತ್ರ ಎಂದು ಸಾಬೀತುಪಡಿಸಿದೆ.

ನಿರ್ದೇಶಕ ಕೀರ್ತನ್ ಅವರು ‘ಕೆಜಿಎಫ್’ ಫ್ರಾಂಚೈಸಿ ಮತ್ತು ‘ಸಲಾರ್’ ಚಿತ್ರಗಳಲ್ಲಿ ಸೆಕೆಂಡ್ ಯೂನಿಟ್ ಡೈರೆಕ್ಟರ್ ಹಾಗೂ ಸಹಾಯಕ ನಿರ್ದೇಶಕರಾಗಿ ಪ್ರಶಾಂತ್ ನೀಲ್ ಜೊತೆ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2025ರ ನವೆಂಬರ್‌ನಲ್ಲಿ ‘418’ ಚಿತ್ರದ ಮುಹೂರ್ತ ನೆರವೇರಿತ್ತು. ಇದೊಂದು ‘ಭಯಾನಕ ಪ್ರಯಾಣ’ ಎಂದು ಕೀರ್ತನ್ ಅವರು ಬಣ್ಣಿಸಿದ್ದಾರೆ.

‘ಕೆಜಿಎಫ್’ ಯಶಸ್ಸಿನ ನಂತರ ಪ್ರಭಾಸ್ ಜೊತೆ ‘ಸಲಾರ್’ ಸಿನಿಮಾ ಮಾಡಿದ ಪ್ರಶಾಂತ್ ನೀಲ್ ಅವರು ತೆಲುಗು ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದರು. ಈಗ ಅವರು ‘418’ ಸಿನಿಮಾವನ್ನು ಪ್ರಸೆಂಟ್ ಮಾಡುವ ಸಲುವಾಗಿ ‘ಮೈತ್ರಿ ಮೂವೀ ಮೇಕರ್ಸ್’ ಜೊತೆ ಕೈ ಜೋಡಿಸಿದ್ದಾರೆ. ಪ್ರಶಾಂತ್ ನೀಲ್ ಅವರ ಬ್ರ್ಯಾಂಡ್ ಮೌಲ್ಯ ಈ ಚಿತ್ರಕ್ಕೆ ದೊಡ್ಡ ಬಲ ತಂದುಕೊಟ್ಟಿದೆ.

ಇದನ್ನೂ ಓದಿ: ‘ಡ್ರ್ಯಾಗನ್’ ಸಿನಿಮಾ ಶೂಟಿಂಗ್ ನಿಲ್ಲಿಸಿದ ಪ್ರಶಾಂತ್ ನೀಲ್, ಜೂ. ಎನ್​ಟಿಆರ್; ಕಾರಣ ಏನು?

ಈ ಹಾರರ್ ಥ್ರಿಲ್ಲರ್ ಚಿತ್ರದಲ್ಲಿ ಸೂರ್ಯ ರಾಜ್, ಚರಣ್ ಲಕ್ಕರಾಜು ಮತ್ತು ಪ್ರೀತಿ ಪಗಡಾಲ ಅವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತೆಲುಗು ಮತ್ತು ಕನ್ನಡ ಎರಡೂ ಭಾಷೆಗಳಲ್ಲಿ ಈ ಸಿನಿಮಾ ಸದ್ದು ಮಾಡುವ ನಿರೀಕ್ಷೆಯಿದೆ. ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *