
ವಾಷಿಂಗ್ಟನ್, ಮೇ 24: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗಿನ ಶಾಂತಿ ಒಪ್ಪಂದ ಹಾಗೂ ಜಾಗತಿಕ ಇಂಧನ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಸಂಚಾರಕ್ಕೆ ಮುಕ್ತಗೊಳಿಸುವ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ಡೊನಾಲ್ಡ್ ಟ್ರಂಪ್ ಅವರು ಈ ಬಗ್ಗೆ ತಮ್ಮ ‘ಟ್ರುತ್ ಸೋಶಿಯಲ್’ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇರಾನ್ ಹಾಗೂ ಇತರ ಸಂಬಂಧಿತ ದೇಶಗಳೊಂದಿಗೆ ಶಾಂತಿಗೆ ಸಂಬಂಧಿಸಿದ ‘ತಿಳಿವಳಿಕೆ ಪತ್ರ’ (MoU) ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಈ ಒಪ್ಪಂದದ ಅತ್ಯಂತ ಪ್ರಮುಖ ಭಾಗವಾಗಿ ಫೆಬ್ರವರಿಯಿಂದ ಮುಚ್ಚಲ್ಪಟ್ಟಿದ್ದ ಹಾರ್ಮುಜ್ ಜಲಸಂಧಿಯನ್ನು ಜಾಗತಿಕ ಹಡಗು ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಇದರಿಂದ ಇತರೆ ದೇಶಗಳು ಕೂಡ ನಿಟ್ಟುಸಿರು ಬಿಡುವಂತಾಗಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ