ಹಾವೇರಿಯಲ್ಲಿ ಸಿನಿಮೀಯ ಶೈಲಿಯಲ್ಲಿ ಕಳ್ಳತನ: ತಿಜೋರಿ ಸಮೇತ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ – Kannada News | Haveri Jewelry Heist: Lakhs Gold Stolen from Sharada Jewelers in Daring 45 Min Robbery

ಹಾವೇರಿ, ಮೇ 16: ಜಿಲ್ಲೆಯ ಹಾನಗಲ್ ತಾಲ್ಲೂಕಿನ ಚಿಕ್ಕಾಂಶಿ ಹೊಸೂರು ಗ್ರಾಮದಲ್ಲಿ ಜ್ಯುವೆಲರಿ ಅಂಗಡಿಯೊಂದರಲ್ಲಿ ಕಳ್ಳತನ ನಡೆದಿದೆ. ಸಿನಿಮೀಯ ರೀತಿಯಲ್ಲಿ ಕೇವಲ 45 ನಿಮಿಷಗಳಲ್ಲಿ ಖದೀಮರ ಗ್ಯಾಂಗ್ ಸುಮಾರು 70 ರಿಂದ 80 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದೆ. ಅಣ್ಣಪ್ಪ ಭಜಂತ್ರಿ ಎಂಬುವರಿಗೆ ಸೇರಿದ ಶಾರದಾ ಜ್ಯುವೆಲರಿ ಶಾಪ್​​ನಲ್ಲಿ ಈ ಕೃತ್ಯ ನಡೆದಿದೆ. ಮುಖಕ್ಕೆ ಮಾಸ್ಕ್ ಹಾಗೂ ಕೈಗೆ ಗ್ಲೌಸ್ ಧರಿಸಿ ಬಂದಿದ್ದ ಕಳ್ಳರು, ಅಂಗಡಿಯ ಬೀಗ ಮುರಿದು ಒಳನುಗ್ಗಿದ್ದಾರೆ. ಬಳಿಕ 7 ಕ್ವಿಂಟಲ್ ತೂಕದ ತಿಜೋರಿ ಸಮೇತ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ. ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಈ ಹಿಂದೆ​​ ಎರಡು ಭಾರಿ ಕೂಡ ಶಾರದಾ ಜ್ಯುವೆಲರಿ ಶಾಪ್​ನಲ್ಲಿ​ ಕಳ್ಳತನಕ್ಕೆ ಯತ್ನಿಸಲಾಗಿತ್ತು. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *