ಹಾವೇರಿ, ಡಿಸೆಂಬರ್ 19: ಕಲ್ಲಿನಿಂದ ಜಜ್ಜಿ ಮಾಲತೇಶ ದೇವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವಂತಹ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಮಾಲತೇಶ ದೇವರ ಮೂರ್ತಿಯ ಮುಖ ಮತ್ತು ಕಣ್ಣಿನ ಭಾಗಕ್ಕೆ ಕಲ್ಲಿನಿಂದ ಜಜ್ಜಲಾಗಿದೆ. ಸದ್ಯ ದುಷ್ಕರ್ಮಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಅಣ್ಣಪ್ಪ ಬಾರ್ಕಿ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.