
ಹಾಸನ, ಜುಲೈ 07: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಶಿರಾಡಿಘಾಟ್ ವ್ಯಾಪ್ತಿಯ ಕಪ್ಪಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ ಉಂಟಾಗಿದೆ. ಸಕಲೇಶಪುರದಿಂದ ಮಂಗಳೂರು ಕಡೆ ತೆರಳುವ ಮಾರ್ಗದಲ್ಲಿ ಘಟನೆ ನಡೆದಿದ್ದು, ತಕ್ಷಣ ಜೆಸಿಬಿ ಬಳಸಿ ಸಿಬ್ಬಂದಿ ಮಣ್ಣು ತೆರವುಗೊಳಿಸುವ ಕಾರ್ಯ ಮಾಡಿದ್ದಾರೆ. ಈ ಬಾರಿ ಗುಡ್ಡ ಕುಸಿದರೂ ಸಂಚಾರಕ್ಕೆ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಲಾಗಿದ್ದು, ಶಿರಾಡಿಘಾಟ್ನಲ್ಲಿ ಭೂಕುಸಿತ ಸಾಧ್ಯತೆ ಸ್ಥಳಗಳನ್ನು ಜಿಲ್ಲಾಡಳಿತ ಗುರುತಿಸಿದೆ. ಅಲ್ಲದೆ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿದರೂ ಅವನ್ನು ಸಿಬ್ಬಂದಿ ತಕ್ಷಣ ತೆರವುಗೊಳಿಸ್ತಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.