ಹಾಸನ, ಆ,14: ಜಿಲ್ಲೆಯಲ್ಲಿ ಭ್ರಷ್ಟಾಚಾರ ನಿಗ್ರಹಕ್ಕೆ ಲೋಕಾಯುಕ್ತ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿ, ಹಳೇಬೀಡು ಪೊಲೀಸ್ ಠಾಣೆಯ ಪಿಎಸ್‌ಐ (ಪೊಲೀಸ್ ಸಬ್ ಇನ್ಸ್‌ಪೆಕ್ಟರ್) ಮಂಜುನಾಥ್ ಅವರನ್ನು ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಎನ್‌ಸಿಆರ್ (Non-Cognizable Report) ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಪಿಎಸ್‌ಐ ಮಂಜುನಾಥ್ ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಬೇಡಿಕೆಯ ಕುರಿತು ಮಾಹಿತಿ ಪಡೆದ ಲೋಕಾಯುಕ್ತ ತಂಡ ಕಾರ್ಯಾಚರಣೆಗೆ ಇಳಿದಿತ್ತು. ನಿನ್ನೆ ಒಂದು ಹೋಟೆಲ್‌ನಲ್ಲಿ ದೂರುದಾರರಿಂದ ಮುಂಗಡವಾಗಿ 20 ಸಾವಿರ ರೂಪಾಯಿ ಹಣವನ್ನು ಪಿಎಸ್‌ಐ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಅವರನ್ನು ವಶಕ್ಕೆ ಪಡೆದರು. ಲಂಚದ ಹಣ ಸಮೇತ ಪಿಎಸ್‌ಐ ಮಂಜುನಾಥ್ ಅವರನ್ನು ಬಂಧಿಸಲಾಗಿದ್ದು, ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಶಿಲ್ಪಾ ಮತ್ತು ಗವಿರಾಜು ಅವರ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ತನ್ನ ಕಾರ್ಯಾಚರಣೆಯನ್ನು ಮುಂದುವರಿಸಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
