
ಬೆಂಗಳೂರು, ಜೂನ್ 11: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. 155 ವಿವಿಧ ಸಂಸ್ಥೆಗಳಿಗೆ 71.85 ಕೋಟಿ ಅನುದಾನ ಮಂಜೂರು ಮಾಡಲಾಗಿದ್ದು, ಸಮುದಾಯ ಭವನ, ಹಾಸ್ಟೆಲ್ ನಿರ್ಮಾಣಕ್ಕೆ ಮೀಸಲಿಟ್ಟ ಬಜೆಟ್ನ ಶೇ. 52ರಷ್ಟು ಹಣವನ್ನು ಕೆಲವೇ ಸಮುದಾಯದ ಸಂಸ್ಥೆಗಳಿಗೆ ನೀಡಲಾಗಿದೆ. 8 ಮಡಿವಾಳ, 2 ಯಾದವ, 01 ಹೆಳವ, ಸವಿತಾ ಸಮಾಜದ 01 ಸಂಘಗಳಿಗೆ ಅನುದಾನ ನೀಡಲಾಗಿದೆ. ಟೀ. ನರಸೀಪುರ ಒಂದೇ ತಾಲೂಕಿಗೆ 13 ಸಮುದಾಯ ಭವನಗಳು ಮಂಜೂರು ಮಾಡಲಾಗಿದ್ದು, ಗದಗದ ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ಗೂ 50 ಲಕ್ಷ ಕೊಟ್ಟಿದ್ದಾರೆ. ಕುರುಬ ಸಮುದಾಯದ 89 ಸಂಘ ಸಂಸ್ಥೆಗಳಿಗೆ ಅನುದಾನ ನೀಡಲಾಗಿದ್ದು, ಹಿಂದುಳಿದ ವರ್ಗಗಳಲ್ಲಿ ಬೇರೆ ಸಮುದಾಯಗಳು ಇಲ್ಲವಾ ಎಂಬ ಪ್ರಶ್ನೆ ಉದ್ಭವಿಸಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.