ನಟ ‘ಗೋಲ್ಡನ್ ಸ್ಟಾರ್’ ಗಣೇಶ್ (Golden Star Ganesh) ಅವರಿಗೆ ಇಂದು (ಜುಲೈ 2) ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ಪ್ರಯುಕ್ತ ಅವರು ತಿರುಪತಿಗೆ ಭೇಟಿ ನೀಡಿದ್ದಾರೆ. ತಿರುಪತಿಯಲ್ಲಿ ದೇವರ ದರ್ಶನ ಪಡೆದಿದ್ದಾರೆ. 48ನೇ ವಸಂತಕ್ಕೆ ಕಾಲಿಟ್ಟಿರುವ ಗಣೇಶ್ ಅವರಿಗೆ ಅಭಿಮಾನಿಗಳು ಜನ್ಮದಿನದ ಶುಭಾಶಯ ತಿಳಿಸುತ್ತಿದ್ದಾರೆ. ಇನ್ನು, ಗಣೇಶ್ ಅವರ ಬರ್ತ್ಡೇ ಪ್ರಯುಕ್ತ ಅಭಿಮಾನಿಗಳಿಗೆ ಡಬಲ್ ಗಿಫ್ಟ್ ಸಿಕ್ಕಿದೆ. ಹೌದು, ಗಣೇಶ್ ನಟಿಸಿರುವ 2 ಸಿನಿಮಾಗಳ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಅಕ್ಟೋಬರ್ 2ರಂದು ‘ಪಿನಾಕ’ ಸಿನಿಮಾ ತೆರೆಕಾಣಲಿದೆ. ಅಕ್ಟೋಬರ್ 16ಕ್ಕೆ ‘ಬೃಂದಾವಿಹಾರಿ’ ಸಿನಿಮಾ ರಿಲೀಸ್ ಆಗಲಿದೆ. ಹೀಗೆ ಬ್ಯಾಕ್ ಟು ಬ್ಯಾಕ್ ಎರಡು ಸಿನಿಮಾಗಳು ಬಿಡುಗಡೆ ಆಗಲಿರುವ ಸುದ್ದಿ ತಿಳಿದು ಅಭಿಮಾನಿಗಳಿಗೆ ಖುಷಿ ಆಗಿದೆ. ಕೇವಲ 14 ದಿನಗಳ ಅಂತರದಲ್ಲಿ ಗಣೇಶ್ ಅಭಿನಯಿಸಿರುವ ಎರಡು ಸಿನಿಮಾಗಳನ್ನು ನೋಡುವ ಅವಕಾಶ ಅಭಿಮಾನಿಗಳಿಗೆ ಸಿಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
