ಹುಬ್ಬಳ್ಳಿ, ಏಪ್ರಿಲ್ 22: ಭೀಕರ ರಸ್ತೆ ಅಪಘಾತದಲ್ಲಿ ಕಾರು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯ ರುಂಡವೇ ಬೇರ್ಪಟ್ಟ ಭಯಾನಕ ಘಟನೆ ಜಿಲ್ಲೆಯ ಕುಂದಗೋಳ ರಸ್ತೆಯ ಶೆರೆವಾಡ ಗ್ರಾಮದ ಬಳಿ ನಿನ್ನೆ ಸಂಜೆ ನಡೆದಿದೆ. ಶೆರೆವಾಡ ಗ್ರಾಮದ ನಿವಾಸಿ ಸದಾನಂದ ಕಟೇಗಾರ (32) ಮೃತ ವ್ಯಕ್ತಿ. ತಾಂತ್ರಿಕ ದೋಷದಿಂದಾಗಿ ಜೆಸಿಬಿ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿತ್ತು. ಸದಾನಂದ ಕೆಳಗೆ ಬಾಗಿ ಜೆಸಿಬಿಯನ್ನು ರಿಪೇರಿ ಮಾಡುತ್ತಿದ್ದ ಸಂದರ್ಭದಲ್ಲಿ, ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ನೇರವಾಗಿ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ರುಂಡವು ದೇಹದಿಂದ ಸಂಪೂರ್ಣವಾಗಿ ಕತ್ತರಿಸಿ, ಕಾರಿನ ಮುಂಭಾಗದ ಇಂಜಿನ್ ಒಳಗೆ ಹೋಗಿ ಸಿಲುಕಿತ್ತು. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.