ಹುಬ್ಬಳ್ಳಿ ಗೋಕುಲ್ ರಸ್ತೆಯ ಬಳಿ ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು!

ಹುಬ್ಬಳ್ಳಿ ಗೋಕುಲ್ ರಸ್ತೆಯ ಬಳಿ ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು!

ಹುಬ್ಬಳ್ಳಿ, ಮಾರ್ಚ್​ 24: ನಗರದ ಗೋಕುಲ್ ರಸ್ತೆಯಲ್ಲಿರುವ ಅರ್ಬನ್ ಓಯಸಿಸ್ ಮಾಲ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road accident) ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಮೇಲೆ ಕೆಬಲ್ ವೈರ್ ಹರಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದ್ದು, ಕಳೆದ ರಾತ್ರಿ ನಡೆದ ಈ ದುರ್ಘಟನೆಯು ಪ್ರದೇಶದಲ್ಲಿ ಆಘಾತ ಮೂಡಿಸಿದೆ.

ಮೃತರನ್ನು ತಾಜ್ ನಗರ ನಿವಾಸಿಗಳಾದ ಫಯಾಜ್ (25) ಮತ್ತು ಮೋಹಿದ್ (27) ಎಂದು ಗುರುತಿಸಲಾಗಿದೆ. ರಸ್ತೆ ಮೇಲೆ ಕೇಬಲ್ ವೈರ್ ಹರಿದು ಬಿದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ಸಾಗುತ್ತಿದ್ದ ಇಬ್ಬರು ಯುವಕರು ಆ ವೈರ್‌ಗೆ ಸಿಲುಕಿ ನಿಯಂತ್ರಣ ಕಳೆದುಕೊಂಡು ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಹುಬ್ಬಳ್ಳಿ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

(ಮಾಹಿತಿ ಅಪ್ಡೇಟ್ ಆಗುತ್ತಿದೆ)

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *