ಹುಬ್ಬಳ್ಳಿ, ಮಾರ್ಚ್ 5: ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ನಡೆಯುತ್ತಿರುವ ಗ್ರಾಮದೇವಿ ಜಾತ್ರೆ ಕೋಮು ಸಾಮರಸ್ಯಕ್ಕೆ ಮಾದರಿಯಾಗಿದೆ. ಅಂಜುಮನ್ ಇಸ್ಲಾಂ ಸಂಸ್ಥೆ ಮುಖಂಡರು ಗ್ರಾಮದೇವಿಯರಿಗೆ ಉಡಿ ತುಂಬಿದ್ದರ ಜತೆಗೆ, ಒಂದು ದಿನ ಭಕ್ತರಿಗೆ ತಾವೇ ಪ್ರಸಾದ ವ್ಯವಸ್ಥೆ ಮಾಡಿ ಭಾವೈಕ್ಯತೆ ಮೆರೆದಿದ್ದಾರೆ. ಸದ್ಯ, ಮುಸ್ಲಿಂ ಮುಖಂಡರು ಊಟದ ವ್ಯವಸ್ಥೆ ಮಾಡಿ ಭಕ್ತರಿಗೆ ಬಡಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದ್ದು, ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.
