
ಹುಬ್ಬಳ್ಳಿ, (ಮಾರ್ಚ್ 07): ಪೊಲೀಸರ ವಿಚಾರಣೆಗೆ ಹೆದರಿ ರೈತನೋರ್ವ (Farmer) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ (Hubballi) ತಾಲೂಕಿನ ಉಮಚಗಿ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಅಂಗಡಿ(48) ಮೃತ ರೈತ. ಹೊಲದ ದಾರಿ ವಿಚಾರವಾಗಿ ಉಮಚಗಿ ಗ್ರಾಮದಲ್ಲಿ ಗಲಾಟೆಯಾಗಿದ್ದು, ಈ ಸಂಬಂಧ ನಿಂಗಪ್ಪನ ಮೇಲೆ ಹಲ್ಲೆ ಮಾಡಿದ್ದಲ್ಲೇ ಅಟ್ರಾಸಿಟಿ ಪ್ರಕರಣ ದಾಖಲಿಸಲಾಗಿದೆ. ಬಳಿಕ ಪೊಲೀಸರು ಕರೆ ಮಾಡಿ ಸ್ಪೆಷನ್ಗೆ ಬರುವಂತೆ ಹೇಳಿದ್ದಾರೆ. ಇದರಿಂದ ಹೆದರಿದ ರೈತ ಜಮೀನಿನಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡು ಪ್ರಾಣಬಿಟ್ಟಿದ್ದಾನೆ.
ಜಮೀನು ಹಾದಿ ಸಂಬಂಧ ಉಮಚಗಿ ಗ್ರಾಮದಲ್ಲಿ ಜಗಳವಾಗಿದ್ದು, ಈ ಸಂಬಂಧ ಗ್ರಾಮ ಪಂಚಾಯಿತಿ ಸದಸ್ಯರು, ನಿಂಗಪ್ಪನನ್ನು ಕರೆಸಿ ಹಲ್ಲೆ ಮಾಡಿದ್ದಾರೆ. ಸಾಲದಕ್ಕೆ ಪಂಚಾಯಿತಿ ಸದಸ್ಯರು, ನಿಂಗಪ್ಪ ವಿರುದ್ಧ ಹುಬ್ಬಳ್ಳಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಈ ಪ್ರಕರಣ ಸಂಬಂಧ ಪೊಲೀಸರು ಸಹ ಎರಡ್ಮೂರು ದಿನಗಳಿಂದ ನಿಂಗಪ್ಪನಿಗೆ ಕರೆ ಮಾಡಿ ಠಾಣೆಗೆ ವಿಚಾರಣೆ ಬರುವಂತೆ ಸೂಚಿಸಿದ್ದಾರೆ. ಇಂದು (ಮಾರ್ಚ್ 07) ಸಹ ಪೊಲಿಸರು, ನಿಮ್ಮ ಮೇಲೆ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಸ್ಟೆಷನ್ಗೆ ಬನ್ನಿ ಎಂದು ನಿಂಗಪ್ಪನಿಗೆ ಕರೆ ಒತ್ತಾಯ ಮಾಡಿದ್ದಾರೆ.
ಇದನ್ನೂ ಓದಿ: 3 ದಿನದಿಂದ ಒಂದೇ ಸಾಂಬಾರು, ಗಂಡನ ಬೈಗುಳಕ್ಕೆ ದುರಂತ ಅಂತ್ಯಕಂಡ ಬೆಂಗಳೂರಿನ ಮಹಿಳೆ
ಮೊದಲೇ ಗ್ರಾಮ ಪಂಚಾಯಿತಿ ಪಂಚಾಯಿತಿ ಸದಸ್ಯರ ಹಲ್ಲೆಯಿಂದ ಮನನೊಂದಿದ್ದ ನಿಂಗಪ್ಪನಿಗೆ ಪೊಲೀಸರು ಸಹ ಮೇಲಿಂದ ಮೇಲೆ ಕರೆ ಮಾಡಿ ಠಾಣೆಗೆ ಬರುವಂತೆ ಒತ್ತಾಯಿಸಿದ್ದರಿಂದ ಭಯಗೊಂಡಿದ್ದು, ಕೊನೆಗೆ ದಿಕ್ಕುತೋಚದಂತಾಗಿ ಜಮೀನಿಗೆ ತೆರಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಿಂಗಪ್ಪನ ಮೇಲೆ ಹಲ್ಲೆ ಮಾಡಿದ್ದಲ್ಲದೇ ಅಟ್ರಾಸಿಟಿ ಕೇಸ್ ದಾಖಲಿಸಿ ಇದೀಗ ಆತನನ್ನು ಬಲಿ ಪಡೆದುಕೊಂಡಿದ್ದಾರೆ. ಇದೀಗ ನಿಂಗಪ್ಪನ ಸಾವಿಗೆ ಹೊಣೆ ಯಾರು? ಈ ರೀತಿಯ ಪ್ರಕರಣದಲ್ಲಿ ಪೊಲೀಸರು ಸಹ ತಮ್ಮ ವಿವೇಚನೆಯಿಂದ ಸರಿ ತಪ್ಪು ನೋಡಬೇಕಿದೆ.