ಹುಲಿಗೆಮ್ಮ ದೇವಿ ಹುಂಡಿಯಲ್ಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ರೂ. ಹಣ ಸಂಗ್ರಹ! – Kannada News | Huligemma Temple Records Over Rs 1 Crore Hundi Collection, Devotees Offer Gold and Silver Ornaments in Koppal

ಕೊಪ್ಪಳ, ಜನವರಿ 9: ಕೊಪ್ಪಳ ತಾಲೂಕಿನ ಹುಲಿಗಿಯಲ್ಲಿರುವ ಪ್ರಸಿದ್ಧ ದೇವತೆ ಶ್ರೀ ಹುಲಿಗೆಮ್ಮ ದೇವಸ್ಥಾನದ ಹುಂಡಿಯಲ್ಲಿ ಅಪಾರ ಪ್ರಮಾಣದ ಹಣ ಹಾಗೂ ಆಭರಣ ಸಂಗ್ರಹವಾಗಿದೆ. ಕಳೆದ 44 ದಿನಗಳಲ್ಲಿ ದೇವಸ್ಥಾನದಲ್ಲಿ ಒಟ್ಟು 1.09 ಕೋಟಿ ರೂಪಾಯಿ ಸಂಗ್ರಹವಾಗಿದ್ದು, ಭಕ್ತರಿಂದ 90 ಗ್ರಾಂ ಬಂಗಾರ ಹಾಗೂ 4.70 ಕೆಜಿ ಬೆಳ್ಳಿ ಆಭರಣಗಳು ಸಮರ್ಪಣೆಯಾಗಿವೆ.

ಕಳೆದ ನವೆಂಬರ್ 24ರಂದು ನಡೆದ ಹಿಂದಿನ ಹುಂಡಿ ಎಣಿಕೆಯಲ್ಲಿ 87.26 ಲಕ್ಷ ರೂಪಾಯಿ ಸಂಗ್ರಹ ದಾಖಲಾಗಿತ್ತು. ಇದೀಗ ಹುಂಡಿ ಹಣ ಒಂದು ಕೋಟಿ ರೂಪಾಯಿ ಗಡಿ ದಾಟಿರುವುದು ವಿಶೇಷವಾಗಿದೆ. ಹುಲಿಗೆಮ್ಮ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಪ್ರಕ್ರಿಯೆಯನ್ನು ಬಿಗಿ ಪೊಲೀಸ್ ಭದ್ರತೆ ಮತ್ತು ನಿಗಾದಲ್ಲಿ ನಡೆಸಲಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಉಪಸ್ಥಿತಿಯಲ್ಲಿ ಪಾರದರ್ಶಕವಾಗಿ ಎಣಿಕೆ ಕಾರ್ಯ ಪೂರ್ಣಗೊಳಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *